ಯಾದಗಿರಿ: ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ನಗರದಲ್ಲಿ ಶುಕ್ರವಾರ ಜನ ಜಾಗೃತಿ ಜಾಥಾಗೆ ಸಂಸದ ರಾಜಾ ಅಮರೇಶ್ವರ ನಾಯಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿವಿಧವ ಶಾಲಾ-ಕಾಲೇಜು ಹಾಗೂ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಯಿತು.
‘ವಿಪತ್ತನಲ್ಲಿಯೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟ್ರ ಹಾಗೂ ಕುಟುಂಬಕ್ಕೆ ನಾಂದಿ' ಎಂಬ ಘೋಷವಾಕ್ಯದೊಡನೆ ಜಿಲ್ಲಾಧಿಕಾರಿ ಕಚೇರಿಬಳಿ ಜಾಗೃತಿ ಜಾಥಾ ಸಂಚರಿಸಿತು.
ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ಶರಣಬಸಪ್ಪ ದರ್ಶನಾಪುರ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಡಾ.ಲಕ್ಷ್ಮೀಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣಾಧಿಕಾರಿ ಪ್ರಭಾಕರ್ ಕವಿತಾಳ, ಕಾರ್ಯಕ್ರಮ ಅಧಿಕಾರಿ ಡಾ.ಭಗವಂತ ಅನ್ವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.