ಶಹಾಪುರ (ಯಾದಗಿರಿ ಜಿಲ್ಲೆ): ಕೆಪಿಸಿಸಿ ರಾಜ್ಯ ಘಟಕದ ಉಪಾಧ್ಯಕ್ಷ, ತಾಲ್ಲೂಕಿನ ಹುಲಕಲ್ ಗ್ರಾಮದ ಮರಿಗೌಡ ಹುಲಕಲ್ (63) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಐವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಬುಧವಾರ (ಜು.24) ರಂದು ಸ್ವಗ್ರಾಮ ಹುಲಕಲ್ದಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತಕೂಟದಲ್ಲಿ ಮರಿಗೌಡ ಗುರುತಿಸಿಕೊಂಡಿದ್ದರು. 1997ರಲ್ಲಿ ಅಂದಿನ ಜನತಾದಳದ ಅಧಿಕಾರವಧಿಯಲ್ಲಿ ರಾಜ್ಯ ಉಣ್ಣೆ ಮತ್ತು ಕುರಿ ನಿಗಮ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ 2014ರಲ್ಲಿ ಕೃಷ್ಣಾ ಕಾಡಾ ಅಧ್ಯಕ್ಷರಾಗಿ ನೇಮಕರಾಗಿದ್ದರು. ಅಲ್ಲದೆ 2010ರಿಂದ2022ವರೆಗೆ 12 ವರ್ಷ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಉತ್ತಮ ಒಡನಾಡಿಯಾಗಿ ಕೆಲಸ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.