ADVERTISEMENT

ಯಾದಗಿರಿ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 9:43 IST
Last Updated 2 ಜುಲೈ 2024, 9:43 IST
   

ಯಾದಗಿರಿ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್.ಪಾಟೀಲ ಅವರು ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮಂಗಳವಾರ ಸಂವಾದ ನಡೆಸಿದರು.

ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗಮನಕ್ಕೆ ತನ್ನಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು‌.‌

‘ಸಂವಾದದಲ್ಲಿ ಕೊನೆ ಬೆಂಚಿನ ಹುಡುಗ ಬಾ. ನಿನ್ನ ಸಮಸ್ಯೆ ಹೇಳಿಕೊ’ ಎಂದು ಸಚಿವರು ತಿಳಿಸಿದಾಗ ಆ ವಿದ್ಯಾರ್ಥಿ ಎನೂ ಸಮಸ್ಯೆ ಇಲ್ಲ ಎಂದು ಹೇಳಿದರು.

ADVERTISEMENT

ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಮಾತನಾಡಿ, ಯಿಮ್ಸ್ ವೈದ್ಯಕೀಯ ಕಾಲೇಜು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದೆ. ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಆಟದ ಮೈದಾನ ನಿರ್ಮಿಸಿ ಕೊಡಿ ಎಂದು ಸಚಿವರಲ್ಲಿ ಮನವಿ ಮಾಡಿದರು.

ಗ್ರಂಥಾಲಯಕ್ಕೆ ಭೇಟಿ: ವೈದ್ಯಕೀಯ ಕಾಲೇಜಿನ ಗ್ರಂಥಾಲಯಕ್ಕೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲಿರುವ ಪುಸ್ತಕಗಳ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿಗಳಿಗೆ ಪುಸ್ತಕ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು, ರಾಜಾ ವೇಣುಗೋಪಾಲ ನಾಯಕ,

ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಯಿಮ್ಸ್ ನಿರ್ದೇಶಕ ಡಾ.ಹನುಮಂತ, ಶಸ್ತ್ರಚಿಕಿತ್ಸಕಿ ಡಾ.ರಿಜ್ವಾನ ಆಫ್ರೀನ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.