ಬ್ಯಾಂಕ್ ಅಧಿಕಾರಿಯಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಸಿಹಿ ಸುದ್ದಿ, ದೇಶದ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್‌ಗಳ (ಪಿಒ) ನೇಮಕಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿಯವರಿಗೆ 300, ಪರಿಶಿಷ್ಟ ಪಂಗಡದವರಿಗೆ 150, ಹಿಂದುಳಿದ ವರ್ಗದವರಿಗೆ 540, ಸಾಮಾನ್ಯ ವರ್ಗದವರಿಗೆ 810,ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 200 ಹುದ್ದೆಗಳು ಮೀಸಲಾಗಿವೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆ?: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ. ಪದವಿ ಅಂತಿಮ ವರ್ಷ/ಸೆಮಿಸ್ಟರ್ ನಲ್ಲಿರುವವರು ತಾತ್ಕಾಲಿಕವಾಗಿ ಅರ್ಜಿ ಸಲ್ಲಿಸಬಹುದು, ಒಂದು ವೇಳೆ ಸಂದರ್ಶನಕ್ಕೆ ಕರೆ ಬಂದರೆ, ಅವರು 31 ನೇ ಡಿಸೆಂಬರ್ 2023 ಅಥವಾ ಅದಕ್ಕಿಂತ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ಪುರಾವೆಗಳನ್ನು ಒದಗಿಸಬೇಕು. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಉತ್ತೀರ್ಣರಾದ ದಿನಾಂಕ 31 ಡಿಸೆಂಬರ್ 2023 ಅಥವಾ ಅದಕ್ಕಿಂತ ಮುಂಚೆಯೇ ಎಂಬುದನ್ನು ಖಚಿತಪಡಿಸಿ ಕೊಳ್ಳಬೇಕು.
ವಯೋಮಿತಿ: 01.04.2023ಕ್ಕೆ, 21 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ ಸಡಿಲಿಕೆ: ಸರಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ/ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ/ ಮತ್ತು ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕವೆಷ್ಟು?: ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ ₹ 750 ಹಾಗೂ ಎಸ್‌ಸಿ/ಎಸ್‌ಟಿ /ಅಂಗ ವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಶುಲ್ಕಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಉಚಿತ ಪರೀಕ್ಷಾ ತರಬೇತಿ: ಎಸ್.ಸಿ/ಎಸ್.ಟಿ/ಒಬಿಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಬ್ಯಾಂಕ್ ವತಿಯಿಂದ ಉಚಿತ ಪರೀಕ್ಷಾ ತರಬೇತಿ ಪಡೆಯಲು ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು. ಪೂರ್ವಭಾವಿ ಪರೀಕ್ಷೆಗೆ ನಿಗದಿಪಡಿಸಿದ ಕೇಂದ್ರಗಳಲ್ಲಿಯೇ ಉಚಿತ ಪರೀಕ್ಷಾ ತರಬೇತಿಯನ್ನೂ ನೀಡಲಾಗುತ್ತದೆ.
ಕೆಟಗರಿ ಕೋಡ್ ಗಮನಿಸಿ: ಅರ್ಜಿ ಸಲ್ಲಿಸುವಾಗ 01 ರಿಂದ 25 ರವರೆಗೆ ಆಯಾಯ ವರ್ಗಕ್ಕೆ ಸಂಬಂಧಿಸಿದ ಕೋಡ್ ನೀಡಲಾಗಿದೆ. ಅದನ್ನು ತುಂಬಲು ಮರೆಯದಿರಿ. ಈ ಬಾರಿ ಗರಿಷ್ಠ ಪರೀಕ್ಷೆಗೆ ಅನುಮತಿಸಲಾದ ಅವಕಾಶಗಳ ಸಂಖ್ಯೆ ನಿಗದಿಪಡಿಸಲಾಗಿದೆ:
ಪ.ಜಾ,/ಪ.ಪಂ ಹಾಗೂ ಇದೇ ಪಂಗಡಗಳ ಅಂಗ ವಿಕಲ ಅಭ್ಯರ್ಥಿಗಳಿಗೆ ಪರೀಕ್ಷೆ ಯನ್ನು ಎಷ್ಟು ಸಲ ಬೇಕಾದರೂ ತೆಗೆದುಕೊಳ್ಳಲು ಅವಕಾಶವಿದೆ. ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ಸಾಮಾನ್ಯ ವರ್ಗದವರಿಗೆ ಗರಿಷ್ಠ 4 ಅವಕಾಶಗಳು, ಒಬಿಸಿ ವರ್ಗದವರಿಗೆ ಗರಿಷ್ಠ 7 ಅವಕಾಶಗಳನ್ನು ನೀಡಲಾಗಿದೆ.
ಪರೀಕ್ಷಾ ಪ್ರಕ್ರಿಯೆ ವಿವರ
ಮೊದಲ ಹಂತ: ಆನ್‌ಲೈನ್ ಪೂರ್ವಭಾವಿ ಪರೀಕ್ಷೆ ನಡೆಯುವ ದಿನಾಂಕ: ನವೆಂಬರ್, 2023
ಎರಡನೇ ಹಂತ: ಆನ್‌ಲೈನ್ ಮುಖ್ಯ ಪರೀಕ್ಷೆ-ಡಿಸೆಂಬರ್-
ಜನವರಿ- 2024
ಮೂರನೇ ಹಂತ: -ಜನವರಿ-ಫೆಬ್ರುವರಿ-2024
ಸೈಕೋಮೆಟ್ರಿಕ್ ಪರೀಕ್ಷೆ: ಸೈಕೋ ಮೆಟ್ರಿಕ್ ಪರೀಕ್ಷೆಯನ್ನು ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ. ಅಭ್ಯರ್ಥಿಗಳ ದೃಷ್ಟಿಕೋನವನ್ನು ಪರಿಶೀಲನೆ ಮಾಡುವುದು ಇದರ ಉದ್ದೇಶ. ಸೈಕೊಮೆಟ್ರಿಕ್ ಪರೀಕ್ಷೆ ನಂತರ ಸಂದರ್ಶನಕ್ಕೆ ಆಯ್ಕೆ ಮಾಡುತ್ತಾರೆ.
ಸೈಕೊ ಮೆಟ್ರಿಕ್ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ಜನವರಿ-ಫೆಬ್ರುವರಿ/ಮಾರ್ಚ್ 2024
ಲೇಖಕರು: ಅಂಕಣಕಾರರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ
ಪರೀಕ್ಷಾ ಪ್ರಕ್ರಿಯೆ:
ಮೊದಲ ಹಂತ: ಆನ್‌ಲೈನ್ ಪೂರ್ವಭಾವಿ ಪರೀಕ್ಷೆ ನಡೆಯುವ ದಿನಾಂಕ: ನವೆಂಬರ್, 2023
ಎರಡನೇ ಹಂತ: ಆನ್‌ಲೈನ್ ಮುಖ್ಯ ಪರೀಕ್ಷೆ-ಡಿಸೆಂಬರ್-
ಜನವರಿ- 2024
ಮೂರನೇ ಹಂತ: -ಜನವರಿ-ಫೆಬ್ರುವರಿ-2024
ಸೈಕೋಮೆಟ್ರಿಕ್ ಪರೀಕ್ಷೆ: ಸೈಕೋ ಮೆಟ್ರಿಕ್ ಪರೀಕ್ಷೆಯನ್ನು ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ. ಅಭ್ಯರ್ಥಿಗಳ ದೃಷ್ಟಿಕೋನವನ್ನು ಪರಿಶೀಲನೆ ಮಾಡುವುದು ಇದರ ಉದ್ದೇಶ. ಸೈಕೊಮೆಟ್ರಿಕ್ ಪರೀಕ್ಷೆ ನಂತರ ಸಂದರ್ಶನಕ್ಕೆ ಆಯ್ಕೆ ಮಾಡುತ್ತಾರೆ.
ಸೈಕೊ ಮೆಟ್ರಿಕ್ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ಜನವರಿ-ಫೆಬ್ರವರಿ/ಮಾರ್ಚ್ 2024
ಕನ್ನಡದಲ್ಲಿ ಅವಕಾಶ ಇಲ್ಲ
ಎಸ್ ಬಿ ಐ ತನ್ನ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಕಳೆದ ಸಲ ಎರಡೂ ಹಂತಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿತ್ತು.ಆದರೆ ಅಧಿಕಾರಿ ಹುದ್ದೆಗಳಿಗೆ ಅವಕಾಶವಿಲ್ಲ ಎಂಬುದನ್ನು ಮರೆಯಬೇಡಿ.
ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ.
ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸೈಕೋ ಮೆಟ್ರಿಕ್ ಪರೀಕ್ಷೆ/ ಸಂದರ್ಶನ (30 ಅಂಕಗಳು) ಮತ್ತು ಗುಂಪು ಚರ್ಚೆ (20 ಅಂಕಗಳು) ಬ್ಯಾಂಕ ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ’(‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ.
ಪರೀಕ್ಷೆ ಸ್ವರೂಪ
ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ 20 ನಿಮಿಷಗಳಂತೆ ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲಿಷ್ ಭಾಷೆಗೆ 30, ಕ್ವಾಂಟಿಟೇಟಿವ್ ಎಪ್ಟಿಟ್ಯೂಡ್ ನ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಠ ಅಂಕ ಗಳಿಸಬೇಕೆಂಬ ನಿಯಮವಿಲ್ಲ.ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.(ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ)
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿದೆ. ನಿಗದಿತ ದಿನ ಆನ್ ಲೈನ್‌ನಲ್ಲಿಯೇ ಎರಡೂ ಲಿಖಿತ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಪರೀಕ್ಷೆಯು ಮೂರು ಗಂಟೆ ಗಳ ಕಾಲ ನಡೆಯಲಿದ್ದು, 155 ಪ್ರಶ್ನೆಗಳನ್ನು 200 ಅಂಕಗಳಿಗೆ ಕೇಳಲಾಗುತ್ತದೆ.
ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳಿವೆ?
ರಾಜ್ಯದಲ್ಲಿ 13 ಪರೀಕ್ಷಾ ಕೇಂದ್ರಗಳಿವೆ: ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.
ಮುಖ್ಯ ಪರೀಕ್ಷೆ: ಕೇವಲ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್‌ಗಳ (ಪಿಒ) ನೇಮಕಕ್ಕೆ ಆನ್‌ಲೈನ್‌ನಲ್ಲಿ ಒಟ್ಟು 2000 ಪ್ರೊಬೇಷನರಿ ಅಧಿಕಾರಿ (Probationary Officer) ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್ 27 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.