ADVERTISEMENT

ಕೃಷಿ ವಿಶ್ವವಿದ್ಯಾಲಯ ಧಾರವಾಡ: ಅಸೋಸಿಯೇಟ್‌, ರಿಸರ್ಚ್‌ ಫೆಲೋ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 6:33 IST
Last Updated 6 ನವೆಂಬರ್ 2019, 6:33 IST
ಕೃಷಿ ವಿಶ್ವವಿದ್ಯಾಲಯ ಧಾರವಾಡ
ಕೃಷಿ ವಿಶ್ವವಿದ್ಯಾಲಯ ಧಾರವಾಡ   

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಅಸೋಸಿಯೇಟ್‌, ರಿಸರ್ಚ್‌ ಫೆಲೋ, ಪ್ರೋಗ್ರಾಮರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದೆ.

ಸಾಂಸ್ಥಿಕ ಅಭಿವೃದ್ಧಿ ಯೋಜನೆಯಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ಆಯ್ಕೆ ನೇರ ಸಂದರ್ಶನದ ಮೂಲಕ ನಡೆಯಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಹುದ್ದೆಗಳ ವಿವರ, ವೇತನ, ವಯೋಮಿತಿ, ನಿಗದಿತ ಅರ್ಜಿ ನಮೂನೆಯ ಮಾಹಿತಿಗಾಗಿ ಅಧಿಸೂಚನೆ ನೋಡುವುದು.

ADVERTISEMENT

ಸಂದರ್ಶನಕ್ಕೂ ಮುಂಚೆ ಯಾವುದೇ ರೀತಿಯ ಅರ್ಜಿ ಹಾಗೂ ದಾಖಲಾತಿಗಳನ್ನು ವಿಶ್ವವಿದ್ಯಾಲಯಕ್ಕೆ ಕಳುಹಿಸಿಕೊಡುವಂತಿಲ್ಲ.ಸಂದರ್ಶನ ನವೆಂಬರ್‌ 14ರಂದು ನಡೆಯಲಿದೆ.

ಸಂದರ್ಶನ ನಡೆಯುವ ಸ್ಥಳ

ಸಹ ಸಂಶೋಧನಾ ನಿರ್ದೇಶಕರ ಕಚೇರಿ

ಕೃಷಿ ವಿಶ್ವವಿದ್ಯಾಲ

ಧಾರವಾಡ

ಈ ಮೇಲಿನ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ನೋಡುವುದು. ಅಧಿಸೂಚನೆಯ ಲಿಂಕ್‌ ಅನ್ನು ಈ ಕೆಳಗೆ ನೀಡಲಾಗಿದೆ.

ಅಧಿಸೂಚನೆ:https://bit.ly/2Cfc4a3

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.