ADVERTISEMENT

ಪಶ್ಚಿಮ ಕೇಂದ್ರ ರೈಲ್ವೆಯಲ್ಲಿ 2226 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 10:39 IST
Last Updated 9 ಅಕ್ಟೋಬರ್ 2021, 10:39 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ವೆಸ್ಟ್‌ಸೆಂಟ್ರಲ್‌ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ2226 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ನೇರ ನೇಮಕಾತಿಯಾಗಿರುತ್ತದೆ.

ಹುದ್ದೆಗಳ ವಿವರ:ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ

ಒಟ್ಟು ಹುದ್ದೆಗಳ ಸಂಖ್ಯೆ:2226

ADVERTISEMENT

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ:ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ:ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್‌ಸಿ / ಎಸ್‌ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ ವಿಧಾನ:ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://wcr.indianrailways.gov.in/ ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 10, ನವೆಂಬರ್‌ 2021

ವೆಬ್‌ಸೈಟ್‌: https://wcr.indianrailways.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.