ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಜೂನಿಯರ್ ಪ್ರೊಗ್ರಾಮರ್ ಒಂಬತ್ತು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಆಗಸ್ಟ್ 8ರಂದು ಅಧಿಸೂಚನೆ ಹೊರಡಿಸಲಾಗಿದೆ.
ಎಷ್ಟೆಷ್ಟು ಹುದ್ದೆಗಳು
ಪ್ರೊಗ್ರಾಮರ್ ಹುದ್ದೆ 2, ಜೂನಿಯರ್ ಪ್ರೋಗ್ರಾಮರ್ ಹುದ್ದೆ 7. ಎರಡೂ ಹುದ್ದೆಗಳೂ ಮೂರು ವರ್ಷಗಳ ಗುತ್ತಿಗೆ ಆಧಾರಿತವಾಗಿವೆ ಎಂದು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ತಿಳಿಸಿದೆ.
ಶೈಕ್ಷಣಿಕ ಅರ್ಹತೆ :
ಯಾವುದೇ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್, ಎಂಸಿಎ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ ವಿಧಾನ: ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನು registrar@rguhs.ac.in ಈ ಇ–ಮೇಲ್‌ಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನ: 25 ಆಗಸ್ಟ್ 2022
ವಿದ್ಯಾರ್ಹತೆ, ಅನುಭವ, ವಯೋಮಿತಿ ಕುರಿತ ಹೆಚ್ಚಿನ ಮಾಹಿತಿಗೆ : http://wrruw.rsuhs.ac.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.