ಕೋಲ್ಕತ್ತ: ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆಯಲ್ಲಿ 2792 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳ ಸಂಖ್ಯೆ: 2792
ಹುದ್ದೆಗಳು: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಪೇಂಟರ್, ಕಾರ್ಪೆಂಟರ್, ವೆಲ್ಡರ್, ಮೆಕ್ಯಾನಿಸ್ಟ್, ಲೈನ್‌ಮ್ಯಾನ್, ವೈರ್‌ಮ್ಯಾನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್.
ವಿದ್ಯಾರ್ಹತೆ: ಮಾನ್ಯತೆ ಪಡೆದ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರುವುದರ ಜತೆಗೆ ಹುದ್ದೆಗೆ ಅನುಗುಣವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೆಟ್ ಪಡೆದಿರಬೇಕು.
ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ: 6 ಫೆಬ್ರುವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ನೇಮಕಾತಿ ಪ್ರಕ್ರಿಯೆ: ದಾಖಲಾತಿಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಹಾಗೂ ಮೆರಿಟ್ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ ₹100.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್http://www.rrcer.com ಗೆ ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ:13 ಮಾರ್ಚ್ 2020
ಅಧಿಸೂಚನೆ ಲಿಂಕ್:https://bit.ly/3aUJ7QS
ವೆಬ್‌ಸೈಟ್:http://www.rrcer.com
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.