ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3612 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳ ನೇಮಕಾತಿ ನಡೆಯಲಿದೆ
ಒಟ್ಟು ಹುದ್ದೆಗಳ ಸಂಖ್ಯೆ: 3612
ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು.
ತರಬೇತಿ ಭತ್ಯೆ: ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ:ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷದೊಳಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್ಸಿ / ಎಸ್ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ನೇಮಕಾತಿ ವಿಧಾನ:ಎಸ್ಎಸ್ಎಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್https://www.rrc-wr.com/TradeApp/Loginಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ: 27, ಜೂನ್, 2022
ವೆಬ್ಸೈಟ್:https://www.rrc-wr.com/TradeApp/Login
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.