ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 4,451 ಪ್ರೊಬೇಷನರಿ ಆಫೀಸರ್(3049) ಸ್ಪೆಷಲ್ಆಫೀಸರ್ (1402)ಗಳ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ಆನ್‌ಲೈನ್ ಮೂಲಕ (https://www.ibps.in)ಅರ್ಜಿ ಸಲ್ಲಿಸಬೇಕು. ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 21 ಅರ್ಜಿ ಸಲ್ಲಿಸಲು ಕೊನೆ ದಿನ .
ಈ ಹುದ್ದೆಗಳಿಗೆ ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ.
ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 30 ವರ್ಷಗಳು. ಸರ್ಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್‌ಸಿ/ಎಸ್‌ಟಿ/ ಅಂಗವಿಕಲರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸ್ಪೆಷಲ್ ಆಫೀಸರ್ ಗಳ ಹುದ್ದೆಗಳಿಗೆ ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ ವಿಜ್ಞಾನ, ಡೇರಿ ಸೈನ್ಸ್, ಫಿಶರಿ ಸೈನ್ಸ್, ಅಗ್ರಿ ಮಾರ್ಕೆಟಿಂಗ್ ಆ್ಯಂಡ್ ಕೋಆಪರೇಷನ್, ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಇನ್ಫರ್ಮೇಶನ್ ಟೆಕ್ನಾಲಜಿ, ಎಚ್ ಆರ್/ಎಚ್‌ಆರ್‌ಡಿ, ಕಾನೂನು ಪದವಿ, ಎಂಬಿಎ, ಹಿಂದಿ ಹಾಗೂ ಸಂಸ್ಕೃತದಲ್ಲಿ ಸ್ನಾತಕೋತ್ತರ ಸಹಿತ ಯಾವುದಾದರೂ ಒಂದು ಪದವಿ ಪಡೆದಿರಬೇಕು.
ಪದವಿ ಪೂರ್ಣಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.
(ಅರ್ಜಿ ಸಲ್ಲಿಸುವ ಕುರಿತು ಹಾಗೂ ಪರೀಕ್ಷಾ ವಿಧಾನದ ವಿವರವಾದ ಮಾಹಿತಿಯನ್ನು ಮುಂದಿನ ಸಂಚಿಕೆಯಲ್ಲಿ ನೀಡಲಾಗುವುದು)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.