ADVERTISEMENT

SSLC, ITI ಪಾಸಾದವರಿಗೆ ಉದ್ಯೋಗ: ರೈಲ್ವೆಯಲ್ಲಿ 6132 ಅಪ್ರೆಂಟಿಸ್‌ಗಳ ನೇಮಕಾತಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2019, 6:34 IST
Last Updated 18 ನವೆಂಬರ್ 2019, 6:34 IST
ಭಾರತೀಯ ರೈಲ್ವೆ
ಭಾರತೀಯ ರೈಲ್ವೆ   

ದಕ್ಷಿಣ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 4103 ಹಾಗೂವಾಯವ್ಯ ರೈಲ್ವೆಯಲ್ಲಿ 2029 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 6132 ಅಪ್ರೆಂಟಿಸ್‌ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ತಾಂತ್ರಿಕ ಶಿಕ್ಷಣ (ಐಟಿಐ) ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.

ದಕ್ಷಿಣ ಮಧ್ಯ ರೈಲ್ವೆ...

ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್‌ಗಳು ಕೆಲಸ ಮಾಡಬೇಕು.ಎ.ಸಿ. ಮೆಕ್ಯಾನಿಕ್, ಕಾರ್ಪೆಂಟರ್, ಡೀಸೆಲ್ ಮೆಕ್ಯಾನಿಕ್, ಎಲೆಕ್ಟ್ರಾನಿಕ್ ಮೆಷಿನ್‌ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಸ್ಟ್, ಪೇಂಟರ್, ವೆಲ್ಡರ್‌ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ADVERTISEMENT

ವಿದ್ಯಾರ್ತಹೆ:ಶೇ 50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಪೂರ್ಣಗೊಳಿಸಿರಬೇಕು. ಹಾಗೂ ಆಯಾ ಟ್ರೇಡ್‌ಗಳಲ್ಲಿ ಐಟಿಐ ಪುರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ:8 ಡಿಸೆಂಬರ್‌ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ:ಕಂಪ್ಯೂಟರ್ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ.

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನ:20 ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆಯ ಲಿಂಕ್ ಅನ್ನು ಕ್ಲಿಕ್ಕಿಸಿ:https://bit.ly/2Qlw433

ವೆಬ್‌ಸೈಟ್‌:https://scr.indianrailways.gov.in

***

ವಾಯವ್ಯರೈಲ್ವೆ...

ಭಾರತೀಯ ರೈಲ್ವೆ ಇಲಾಖೆಯ ವಾಯವ್ಯ ರೈಲ್ವೆಯಲ್ಲಿ2029ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಪೇಂಟರ್‌, ಪೈಪ್ ಫಿಟ್ಟರ್, ಡೀಸೆಲ್ ಮೆಕ್ಯಾನಿಕ್, ವೈರ್‌ಮೆನ್‌, ವೆಲ್ಡರ್‌, ಟೆಕ್ನಿಷಿಯನ್ ಸೇರಿದಂತೆ ವಿವಿಧಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಹಾಗೂ ಹುದ್ದೆಗೆ ತಕ್ಕ ಟ್ರೇಡ್‌ಗಳಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:8 ಡಿಸೆಂಬರ್‌ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 (ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ).

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಕಂಪ್ಯೂಟರ್ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆಯ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ:20 ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ: https://bit.ly/2O9BLP2

ವೆಬ್‌ಸೈಟ್‌:http://www.rrcjaipur.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.