ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ.ಎಂಜಿನಿಯರಿಂಗ್ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಪ್ರಾಜೆಕ್ಟ್ ಮ್ಯಾನೇಜರ್‌ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಬಹುದು.
ಹುದ್ದೆಗಳು: ಪ್ರಾಜೆಕ್ಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 43
ಸ್ಥಳ: ಬೆಂಗಳೂರು ಮತ್ತು ಇತರೆ ಕಡೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್ ಪದವಿ ಪಡೆದಿರಬೇಕು.ಸಾಫ್ಟ್‌ವೇರ್‌ನಲ್ಲಿ ಎರಡು ವರ್ಷ ಕಾರ್ಯಾನುಭವ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡುವುದು.
ವಯೋಮಿತಿ: ಗರಿಷ್ಠ 32 ವರ್ಷ ಮೀರಿರಬಾರದು . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ: ಪದವಿಯಲ್ಲಿ ಪಡೆದ ಗರಿಷ್ಠ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ನಡೆಯುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-06-2022
ಹೆಚ್ಚಿನ ಮಾಹಿತಿಗೆವೆಬ್‌ಸೈಟ್ ನೋಡುವುದು:https://www.bel-india.in/Documentviews.aspx?fileName=Detailed%20Web%20advertisement-8-6-22.pdf
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.