ADVERTISEMENT

ಗ್ರಾಮ ಆಡಳಿತಾಧಿಕಾರಿ ಹುದ್ದೆ: ಪೂರಕ ದಾಖಲೆ ಸಲ್ಲಿಸಲು ಇದೇ 26 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 0:12 IST
Last Updated 21 ಆಗಸ್ಟ್ 2024, 0:12 IST
   

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗದ ಅಭ್ಯರ್ಥಿಗಳು ಇದೇ 26ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

‘ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು’ ಎಂದು ಅವರು ಹೇಳಿದ್ದಾರೆ. 

ಕಡ್ಡಾಯ ಕನ್ನಡ ಪರೀಕ್ಷೆ:

ADVERTISEMENT

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆ. 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಅವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದೂ ಪ್ರಸನ್ನ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.