ADVERTISEMENT

277 ಗ್ರೂಪ್–ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಒಟ್ಟು 277 ಗ್ರೂಪ್– ಬಿ ಹುದ್ದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2024, 15:15 IST
Last Updated 13 ಮಾರ್ಚ್ 2024, 15:15 IST
<div class="paragraphs"><p>KPSC</p></div>

KPSC

   

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಒಟ್ಟು 277 ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.

ಮುಂದಿನ ತಿಂಗಳು ಏಪ್ರಿಲ್ 15ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ADVERTISEMENT

ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ ₹300, ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ ₹150, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50 ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ–1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ವಿವರವಾದ ಅಧಿಸೂಚನೆಗೆ kpsc.kar.nic.in ಭೇಟಿ ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.