ADVERTISEMENT

ಸ್ಪರ್ಧಾವಾಣಿ: ಬಹು ಆಯ್ಕೆಯ ಪ್ರಶ್ನೋತ್ತರಗಳು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2024, 23:27 IST
Last Updated 20 ನವೆಂಬರ್ 2024, 23:27 IST
<div class="paragraphs"><p>ಪ್ರಶ್ನೋತ್ತರಗಳು</p></div>

ಪ್ರಶ್ನೋತ್ತರಗಳು

   ಪ್ರಾತಿನಿಧಿಕ ಚಿತ್ರ

1. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 2023-24ರ ಕೇಂದ್ರ ಬಜೆಟ್‌ನಲ್ಲಿ ಭಾರತೀಯ ರೈಲ್ವೆಗೆ, ಒಟ್ಟು ₹ 2.40 ಲಕ್ಷ ಕೋಟಿಗಳನ್ನು ಮೀಸಲಿಡಲಾಗಿದೆ.

ADVERTISEMENT

ಬಿ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ 4ನೇ ಹಂತದ ಪ್ರಾರಂಭ ಮಾಡಲಾಗುವುದು ಎಂದು 2024-25ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ : ಡಿ

2. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಬಾಹ್ಯಾಕಾಶ ಆರ್ಥಿಕತೆಯ ಉದ್ದೇಶಕ್ಕಾಗಿ ₹1,000 ಕೋಟಿ ಮೊತ್ತದ ವೆಂಚರ್‌ ಕ್ಯಾಪಿಟಲ್‌ ನಿಧಿಯನ್ನು ಸ್ಥಾಪಿಸಲಾಗುವುದು ಎಂದು 2024-25ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಬಿ. ಮೂಲ ಸಂಶೋಧನೆ ಮತ್ತು ಮೂಲ ಮಾದರಿಯ ಅಭಿವೃದ್ಧಿಗಾಗಿ ಅನುಸಂಧಾನ್‌ ರಾಷ್ಟ್ರೀಯ ಸಂಶೋಧನಾ ನಿಧಿಯನ್ನು ಕಾರ್ಯಗತಗೊಳಿಸಲಾಗುವುದು ಎಂದು 2024-25ರ ಕೇಂದ್ರ ಬಜೆಟ್‌ ನಲ್ಲಿ ಘೋಷಿಸಲಾಗಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

3. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅನ್ನು ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ರಾಂಚಿಯಲ್ಲಿ ಸೆಪ್ಟೆಂಬರ್ 23, 2018ರಂದು ಪ್ರಾರಂಭಿಸಿದರು.

ಬಿ. ಆಯುಷ್ಮಾನ್ ಭಾರತ್ ಯೋಜನೆಯ ಅಡಿ ಬಡ ಕುಟುಂಬಗಳಿಗೆ ವರ್ಷಕ್ಕೆ ₹10 ಲಕ್ಷದವರೆಗೆ ವಿಮಾ ಸೌಲಭ್ಯ ಕಲ್ಪಿಸಲಾಗುತ್ತದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಎ

4. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಯುನಿವರ್ಸಲ್ ಹೆಲ್ತ್ ಕವರೇಜ್ (UHC) ದೃಷ್ಟಿಯನ್ನು ಸಾಧಿಸಲು ರಾಷ್ಟ್ರೀಯ ಆರೋಗ್ಯ ನೀತಿ 2017ರ ಶಿಫಾರಸಿನಂತೆ ಭಾರತ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿದೆ.

ಬಿ. 2024ರ ಪರಿಷ್ಕೃತ ಯೋಜನೆಯಲ್ಲಿ ಬಡ ಕುಟುಂಬಗಳಿಗೆ ₹5 ಲಕ್ಷದವರೆಗಿನ ವಿಮಾ ಸೌಲಭ್ಯದ ಜೊತೆಗೆ ಹೆಚ್ಚುವರಿಯಾಗಿ ಆದಾಯದ ಇತಿ ಮಿತಿಗಳಿಲ್ಲದೆ, 70 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ವಾರ್ಷಿಕ ₹5 ಲಕ್ಷದವರೆಗೆ ವಿಮಾ ಸೌಲಭ್ಯ ಸಿಗಲಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.
ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

5. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 2024ರಲ್ಲಿ ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಬಿ. ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ಸಾಮಾನ್ಯ ವರ್ಗದ 19 ಲಕ್ಷ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಶೇ 100ರಷ್ಟು ವೆಚ್ಚ ಭರಿಸುತ್ತದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಬಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.