ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ (ಆರ್ಸಿಎಫ್ಎಲ್) ಯಾವುದೇ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳಿಂದ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹುದ್ದೆ ಹೆಸರು : ಸೆಕ್ರೇಟರಿಯಲ್ ಅಸಿಸ್ಟಂಟ್
ಹುದ್ದೆಗಳ ಸಂಖ್ಯೆ : 70
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವೇತನ: ಕೇಂದ್ರ ಸರ್ಕಾರದ ವೇತನ ಆಯೋಗದ ಅನ್ವಯ ಮಾಸಿಕ ವೇತನ ನೀಡಲಾಗುವುದು.
ವಯಸ್ಸು: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಟ 25 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಆಯ್ಕೆ ವಿಧಾನ: ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ನೇರ ನೇಮಕ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಕಡೆ ದಿನ: 08-04-2023
ವೆಬ್ಸೈಟ್ ವಿಳಾಸ : https://www.rcfltd.com
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.