ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (ಆರ್‌ಆರ್‌ಬಿ) ಖಾಲಿಯಿರುವ 8,612 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ಸೇರಿದ್ದು, ಈ ಎರಡು ಬ್ಯಾಂಕ್‌ಗಳಲ್ಲಿ ಖಾಲಿ ಇರುವ 806 ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 21 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ.
ವಯೋಮಿತಿ: ಆಫೀಸ್‌ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು. ಆಫೀಸರ್ ಸ್ಟೇಲ್- II ಹುದ್ದೆಗೆ 21 ರಿಂದ 32 ವರ್ಷಗಳು ಹಾಗೂ ಆಫೀಸರ್ ಸ್ಟೇಲ್ - III ಹುದ್ದೆಗೆ 21 ರಿಂದ 40 ವರ್ಷದೊಳಗಿರಬೇಕು. ಎಸ್.ಸಿ ಮತ್ತು ಎಸ್.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ.
ಶೈಕ್ಷಣಿಕ ಅರ್ಹತೆ ಮತ್ತು ಅನುಭವ: ಆಫೀಸ್ ಅಸಿಸ್ಟೆಂಟ್‌ಹುದ್ದೆ ಹಾಗೂ ಆಫೀಸರ್ ಸ್ಕೇಲ್-I ಗೆ ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್‌ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.
ಆಫೀಸ್ ಅಸಿಸ್ಟೆಂಟ್‌ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಫೀಸರ್ ಸ್ಕೇಲ್-I(ಸಹಾಯಕ ವ್ಯವಸ್ಥಾಪಕ): ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ.
ಸ್ಕೇಲ್–II ಅಧಿಕಾರಿಗಳ ಹುದ್ದೆ: ಸ್ಕೇಲ್–II ಅಧಿಕಾರಿಗಳಿಗೆ (ವ್ಯವಸ್ಥಾಪಕರು), ಅಗ್ರಿಕಲ್ಚರ್ ಆಫೀಸರ್ /ಲಾ ಆಫೀಸರ್‌ಗಳಿಗೆ ಯಾವುದೇ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಎರಡು ವರ್ಷಗಳ ಸೇವೆ/ ಸ್ಪೆಷಲ್‌ಆಫೀಸರ್ಸ್ ಗಳು/ಚಾರ್ಟೆಡ್ ಅಕೌಂಟೆಂಟ್ /ಟ್ರಶರಿ ಆಫೀಸರ್/ ಮಾರ್ಕೆಟಿಂಗ್ ಆಫೀಸರ್/ಗೆ ಒಂದು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವ್ಯವಸ್ಥಾಪಕರು: ಯಾವುದೇ ವಿಷಯದಲ್ಲಿ ಶೇ 50 ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಬ್ಯಾಂಕಿಂಗ್, ಹಣಕಾಸು, ಮಾರುಕಟ್ಟೆ, ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ.
ಸ್ಪೆಷಲ್‌ಆಫೀಸರ್ಸ್: ಇನ್ ಫಾರ್ಮೇಷನ್ ಟೆಕ್ನಾಲಜಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಶೇ 50 ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್ / ಕಮ್ಯುನಿಕೇಶನ್ / ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನದಲ್ಲಿ ಪದವಿ ಪಡೆದಿರಬೇಕು. ಇದರ ಜೊತೆಗೆ, ASP, PHP, C++, Java, VB, VC, OCP ಸಾಫ್ಟ್‌ವೇರ್ ಕಲಿಕೆಯ ಪ್ರಮಾಣಪತ್ರ.
ಚಾರ್ಟೆಡ್ ಅಕೌಂಟೆಂಟ್: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಸರ್ಟಿಫೈಡ್ ಅಸೋಸಿಯೇಟ್ (CA) ಪದವಿ ಪಡೆದಿರುವುದು ಕಡ್ಡಾಯ.
ಲಾ ಆಫೀಸರ್: ಶೇ 50 ಅಂಕಗಳೊಂದಿಗೆ ಕಾನೂನು ಪದವಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು.ಅಥವಾ ಎರಡು ವರ್ಷ ವಕೀಲರಾಗಿ ಕೆಲಸ ಮಾಡಿರಬೇಕು.
ಟ್ರಶರಿ ಆಫೀಸರ್: ಹಣಕಾಸು ವಿಷಯದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಅಥವಾ ಎಂಬಿಎ ಪದವಿ ಪಡೆದಿರಬೇಕು.
ಮಾರ್ಕೆಟಿಂಗ್ ಆಫೀಸರ್: ಮಾರ್ಕೆಟಿಂಗ್‌ನಲ್ಲಿ ಎಂಬಿಎ ಪದವಿ ಹೊಂದಿರಬೇಕು.
ಅಗ್ರಿಕಲ್ಚರ್ ಆಫೀಸರ್: ಈ ಹುದ್ದೆಗಳಿಗೆ ಕೃಷಿ/ತೋಟಗಾರಿಕೆ/ಹೈನುಗಾರಿಕೆ/ ಪಶುಸಂಗೋಪನೆ/ ಅರಣ್ಯಶಾಸ್ತ್ರ /ಪಶುವೈದ್ಯಕೀಯ ವಿಜ್ಞಾನ/ಕೃಷಿ ಎಂಜಿನಿಯರಿಂಗ್/ಮೀನುಗಾರಿಕೆ ವಿಷಯದಲ್ಲಿ ಶೇ 50 ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಹಿರಿಯ ವ್ಯವಸ್ಥಾಪಕ(ಸ್ಕೇಲ್-III): ಯಾವುದೇ ವಿಷಯದಲ್ಲಿ ಶೇ 50 ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಬ್ಯಾಂಕಿಂಗ್, ಹಣಕಾಸು, ಮಾರುಕಟ್ಟೆ, ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನು ಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಕೌಂಟೆನ್ಸಿಯಲ್ಲಿ ಪದವಿ/ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ. ಜೊತೆಗೆ ಬ್ಯಾಂಕ್‌ಅಥವಾ ವಿತ್ತೀಯ ಸಂಸ್ಥೆಗಳಲ್ಲಿ ಐದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
ಕ್ರೆಡಿಟ್ ಇತಿಹಾಸ: (i) ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್‌ಖಾತೆ ಹೊಂದಿದ್ದರೆ, ಅವರು CIBIL ಸ್ಕೋರ್ ಚೆನ್ನಾಗಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್ 650 ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
(ii) ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ವರದಿ ಪ್ರತಿಕೂಲವಾಗಿದ್ದಲ್ಲಿ ಆ ಸಾಲದ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಬ್ಯಾಂಕಿನಿಂದ ನಿರಾಪೇಕ್ಷಣಾ ಪತ್ರ(NOC) ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.
ಶುಲ್ಕಪಾವತಿ
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹ 850 ಹಾಗೂ ಎಸ್‌ಸಿ/ಎಸ್‌ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
* ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ ಎರಡಕ್ಕೂ ಅರ್ಜಿ ಸಲ್ಲಿಸಬಹುದು.
* ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ ಜಾಲತಾಣಕ್ಕೆ ಭೇಟಿ ನೀಡಿ.
(ಲೇಖಕರು ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ)
(ಮುಂದಿನ ವಾರ: ಪರೀಕ್ಷೆಯ ವಿಷಯಗಳು ಮತ್ತು ಸಿದ್ಧತೆ ಕುರಿತ ವಿವರ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.