ನವದೆಹಲಿ:ರೈಲ್ವೆ ಇಲಾಖೆಯ ದಕ್ಷಿಣರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3378 ಟ್ರೇಡ್ ಅಪ್ರೆಂಟಿಸ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ದಕ್ಷಿಣ ರೈಲ್ವೆಯ ತಮಿಳುನಾಡುವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಇದು ನೇರ ನೇಮಕಾತಿಯಾಗಿರುತ್ತದೆ.
ಹುದ್ದೆಗಳವಿವರ:ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳ ನೇಮಕಾತಿ ನಡೆಯಲಿದೆ
ಒಟ್ಟು ಹುದ್ದೆಗಳ ಸಂಖ್ಯೆ: 3378
ವಿದ್ಯಾರ್ಹತೆ: ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ತರಬೇತಿ ಭತ್ಯೆ:ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ಮಾಸಿಕ ₹6,000 ರಿಂದ ₹7000 ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ: ಜೂನ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ನೇಮಕಾತಿ ವಿಧಾನ:ಎಸ್ಎಸ್ಎಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://sr.indianrailways.gov.in ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ:30 ಜೂನ್, 2021
ವೆಬ್ಸೈಟ್: https://sr.indianrailways.gov.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.