ADVERTISEMENT

ಪರೀಕ್ಷಾ ಅಕ್ರಮದ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಎಸ್‌ಎಸ್‌ಸಿ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಎಚ್ಚರಿಸಿದೆ

ಪಿಟಿಐ
Published 13 ಸೆಪ್ಟೆಂಬರ್ 2024, 12:38 IST
Last Updated 13 ಸೆಪ್ಟೆಂಬರ್ 2024, 12:38 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ನವದೆಹಲಿ: ಸರ್ಕಾರಿ ಹುದ್ದೆಗಳ ಭರ್ತಿಗೆ ನಡೆಯುವ ನೇಮಕಾತಿ ಪರೀಕ್ಷೆಗಳ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಎಚ್ಚರಿಸಿದೆ. 

ಯಾವುದೇ ರೂಪದಲ್ಲಿ ಪ್ರಶ್ನೆಪತ್ರಿಕೆಗಳನ್ನು ಪ್ರಕಟಿಸುವುದು, ನಕಲು ಮಾಡುವುದು, ಪ್ರಸಾರ ಮಾಡುವುದು, ಸಂಗ್ರಹ ಮಾಡುವುದು ಕಂಡುಬಂದಲ್ಲಿ ಅದನ್ನು ಗಂಭೀರ ಅಪರಾಧ ಎಂದು ಪರಿಗಣಿಸಿ ಅಂಥ ಅಭ್ಯರ್ಥಿಗಳು ಪರೀಕ್ಷೆ ಬರೆಯದಂತೆ ನಿಷೇಧ ಹೇರಲಾಗುವುದು ಎಂದು ಅದು ಹೇಳಿದೆ.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ನೀಡಲಾಗುವ ಕರಡು ಹಾಳೆಗಳನ್ನು ತೆಗೆದುಕೊಂಡು ಹೋಗುವುದನ್ನೂ ದುರ್ನಡತೆ ಎಂದು ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಕೆಲವರು ಯುಟ್ಯೂಬ್‌, ಫೇಸ್‌ಬುಕ್‌ ಮತ್ತಿತರ ಸಾಮಾಜಿಕ ಮಾಧ್ಯಮಗಳ ಮೂಲಕ ಇಂಥ ಕೃತ್ಯ ಎಸಗುತ್ತಿರುವುದು ಕಂಡುಬಂದ ಕಾರಣ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.