ADVERTISEMENT

ಸಿಇಟಿ ರಾಂಕಿಂಗ್ ಬಿಕ್ಕಟ್ಟು ಶಮನ: ಸೆ.29ರಂದು ಪರಿಷ್ಕೃತ ರಾಂಕಿಂಗ್ ಪ್ರಕಟ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 15:36 IST
Last Updated 23 ಸೆಪ್ಟೆಂಬರ್ 2022, 15:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವೃತಿಪರ ಕೋರ್ಸ್ ಗಳ ಸಿಇಟಿ ರಾಂಕಿಂಗ್ ಗೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ.

ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಜತೆಗೆ ಅಕ್ಟೋಬರ್‌ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು. ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದೆವು. ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.