ನವದೆಹಲಿ: ಭಾರತೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ.
12ನೇ ತರಗತಿಯಲ್ಲಿ ಶೇ 0.2ರಷ್ಟು ಅಂತರದಿಂದ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ವಿಶೇಷ ಸಂದರ್ಭದಲ್ಲಿ ಫಲಿತಾಂಶ ನಿರ್ಧರಿಸಿರುವುದರಿಂದ, ಕಳೆದ ವರ್ಷದಂತೆಯೇ ಈ ಬಾರಿಯೂ ಮೆರಿಟ್ ಲಿಸ್ಟ್ ಇಲ್ಲ ಎಂದು ಮಂಡಳಿ ತಿಳಿಸಿದೆ.
ಕೋವಿಡ್ ಸಾಂಕ್ರಾಮಿಕದ ಕಾರಣ ಈ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದಲ್ಲಿ ಫಲಿತಾಂಶ ನಿರ್ಧರಿಸಲಾಗಿದೆ.
‘10ನೇ ತರಗತಿಯಲ್ಲಿ ಬಾಲಕಿಯರು ಮತ್ತು ಬಾಲಕರು ಸೇರಿ ತೇರ್ಗಡೆ ಪ್ರಮಾಣ ಶೇ 99.98 ಇದೆ. 12ನೇ ತರಗತಿಯಲ್ಲಿ ಬಾಲಕಿಯರ ತೇರ್ಗಡೆ ಪ್ರಮಾಣ ಶೇ 99.86 ಇದ್ದು, ಬಾಲಕರ ತೇರ್ಗಡೆ ಪ್ರಮಾಣ ಶೇ 99.66 ಇದೆ’ ಎಂದು ಸಿಐಎಸ್‌ಸಿಇ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಗೆರ್ರಿ ಅರಾಥೂನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.