ADVERTISEMENT

UPSC, KPSC EXAM: ಬಹುಆಯ್ಕೆಯ ಪ್ರಶ್ನೋತ್ತರಗಳು

ಪ್ರಜಾವಾಣಿ ವಿಶೇಷ
Published 30 ಅಕ್ಟೋಬರ್ 2024, 23:30 IST
Last Updated 30 ಅಕ್ಟೋಬರ್ 2024, 23:30 IST
   

ಬಹು ಆಯ್ಕೆಯ ಪ್ರಶ್ನೆಗಳು

1. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಪ್ರಸ್ತುತ, ಶಾಂಘೈ ಸಹಕಾರ ಸಂಘಟನೆಯಲ್ಲಿರುವ 10 ಸದಸ್ಯ ರಾಷ್ಟ್ರಗಳೆಂದರೆ ಚೀನಾ, ಖಝಾಕಿಸ್ತಾನ್, ಕಿರ್ಗಿಸ್ತಾನ್, ರಷ್ಯಾ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಭಾರತ, ಪಾಕಿಸ್ತಾನ, ಇರಾನ್ ಮತ್ತು ಬೆಲಾರಸ್ ಆಗಿದೆ.

ಬಿ. ಬೆಲಾರಸ್ ಅಧಿಕೃತವಾಗಿ ಜುಲೈ 2024ರಲ್ಲಿ ಶಾಂಘೈ ಸಹಕಾರ ಸಂಘಟನೆಗೆ ಸೇರಿಕೊಂಡಿತು ಮತ್ತು ಅದರ 10ನೇ ಸದಸ್ಯ ರಾಷ್ಟ್ರವಾಯಿತು.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ADVERTISEMENT

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

2. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಶಾಂಘೈ ಸಹಕಾರ ಸಂಘಟನೆಯನ್ನು ಜೂನ್ 2001ರಲ್ಲಿ ಶಾಂಘೈ (ಚೀನಾ) ನಲ್ಲಿ ರಚಿಸಲಾಯಿತು.

ಬಿ. 2017ರಲ್ಲಿ ಅಸ್ತಾನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಮುಖ್ಯಸ್ಥರ ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಪೂರ್ಣ ಸದಸ್ಯತ್ವ ಪಡೆದವು.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

3. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಶಾಂಘೈ ಸಹಕಾರ ಸಂಘಟನೆಯ ಸೆಕ್ರೆಟರಿಯೇಟ್ ಚೀನಾದ ಬೀಜಿಂಗ್‌ನಲ್ಲಿದೆ.

ಬಿ. ಜಾಂಗ್ ಮಿಂಗ್ ಅವರು ಶಾಂಘೈ ಸಹಕಾರ ಸಂಘಟನೆಯ ಪ್ರಸ್ತುತ(ಅಕ್ಟೋಬರ್, 2024) ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

4. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 1996ರಿಂದ ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ.

ಬಿ. ಮೊದಲ ಬಾರಿಗೆ ಅರ್ಥಶಾಸ್ತ್ರ ವಿಭಾಗದ ನೊಬೆಲ್‌ ಪ್ರಶಸ್ತಿಯನ್ನು ರಾಗ್ನರ್ ಫ್ರಿಶ್ ಮತ್ತು ಜಾನ್ ಟಿನ್ಬರ್ಗೆನ್ (Ragnar Frisch and Jan Tinbergen) ರವರು ಪಡೆದಿದ್ದಾರೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಬಿ

5. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 2024ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್‌ ಪುರಸ್ಕಾರಕ್ಕೆ, ಅಮೆರಿಕಾದ ಮೂವರು ಅರ್ಥಶಾಸ್ತ್ರಜ್ಞರಾದ ಡೆರಾನ್‌ ಆಶಿಮೊಗ್ಲೊ, ಸೈಮನ್ಸ್‌ ಜಾನ್ಸನ್‌ ಹಾಗೂ ಜೇಮ್ಸ್‌ ಎ. ರಾಬಿನ್ಸನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಬಿ. 2024ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ಪ್ರಶಸ್ತಿಯನ್ನು ದೇಶಗಳ ನಡುವಿನ ಶ್ರೀಮಂತಿಕೆಯ ವ್ಯತ್ಯಾಸಕ್ಕೆ ಆಯಾ ದೇಶಗಳಲ್ಲಿನ ಸಾಮಾಜಿಕ ವ್ಯವಸ್ಥೆಗಳು (ಶಿಕ್ಷಣ, ಪೊಲೀಸ್‌, ಕುಟುಂಬ, ಕಾನೂನು, ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆ ಮುಂತಾದವು) ಕಾರಣವಾಗುತ್ತವೆ’ ಎನ್ನುವುದನ್ನು ನೊಬೆಲ್‌ ಪುರಸ್ಕಾರಕ್ಕೆ ಪಾತ್ರರಾದ ಅರ್ಥಶಾಸ್ತ್ರಜ್ಞರು ವಿವರಿಸಿದ್ದಾರೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

6. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 2014ರಲ್ಲಿ ಕೈಲಾಶ್ ಸತ್ಯಾರ್ಥಿ ಅವರು ಶಾಂತಿ ವಿಭಾಗದಲ್ಲಿ ನೊಬೆಲ್‌ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬಿ. 2019ರಲ್ಲಿ ಅಭಿಜಿತ್ ಬ್ಯಾನರ್ಜಿ ಅವರು ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್‌ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

7. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಪೂರ್ವ ಏಷ್ಯಾ ಶೃಂಗಸಭೆಯು (EAS)ರಾಜಕೀಯ, ಭದ್ರತೆ ಮತ್ತು ಆರ್ಥಿಕ ಸವಾಲುಗಳನ್ನು ಚರ್ಚಿಸಲು ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳ ನಾಯಕರಿಗೆ ವೇದಿಕೆಯಾಗಿದೆ.

ಬಿ. ಪೂರ್ವ ಏಷ್ಯಾ ಶೃಂಗಸಭೆಯನ್ನು 2005ರಲ್ಲಿ ಕೌಲಾಲಂಪುರ್‌ನಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘಟನೆ (ASEAN) ಸ್ಥಾಪಿಸಿತು.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

8. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಪ್ರಸ್ತುತ, ಪೂರ್ವ ಏಷ್ಯಾ ಶೃಂಗಸಭೆಯು ವಿಶ್ವದ ಶೇ. 54 ರಷ್ಟು ಜನಸಂಖ್ಯೆಯನ್ನು ಮತ್ತು ಜಾಗತಿಕ ಜಿ.ಡಿ.ಪಿಯ ಪಾಲಿನಲ್ಲಿ ಶೇ 58 ರಷ್ಟು ಭಾಗವನ್ನು ಪ್ರತಿನಿಧಿಸುವ 18 ದೇಶಗಳ ವೇದಿಕೆಯಾಗಿದೆ.

ಬಿ. ಭಾರತವು 2018ರಿಂದ ಪೂರ್ವ ಏಷ್ಯಾ ಶೃಂಗಸಭೆಯ ಸದಸ್ಯತ್ವವನ್ನು ಹೊಂದಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಎ

9. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. 11 ಅಕ್ಟೋಬರ್ 2024 ರಂದು ಲಾವೊಸ್‌ (ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್) ನ ವಿಯೆಂಟಿಯಾನ್‌ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆ (EAS) ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.

ಬಿ. ನ್ಯಾವಿಗೇಷನ್ ಮತ್ತು ವಾಯುಪ್ರದೇಶದ ಸ್ವಾತಂತ್ರ್ಯವನ್ನು ಒತ್ತಿಹೇಳುವ ವಿಶ್ವಸಂಸ್ಥೆಯ ಸಮುದ್ರದ ಕಾನೂನು (UNCLOS)ಗೆ ಬದ್ಧವಾಗಿರುವ ಸಮುದ್ರ ಚಟುವಟಿಕೆಗಳ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿಯವರು 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಒತ್ತಿ ಹೇಳಿದ್ದಾರೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.