ADVERTISEMENT

ಮೂರು ವರ್ಷಗಳ ಡಿ‍ಪ್ಲೊಮಾ ಕೋರ್ಸ್‌ ಇನ್ನು ಮುಂದೆ ಪಿಯುಸಿ ಸಮಾನ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 16:32 IST
Last Updated 30 ಸೆಪ್ಟೆಂಬರ್ 2021, 16:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಮೂರು ವರ್ಷಗಳ ಡಿ‍ಪ್ಲೊಮಾ ಕೋರ್ಸ್‌ ಇನ್ನುಮುಂದೆ ಪಿಯುಸಿ ವಿದ್ಯಾರ್ಹತೆ ತತ್ಸಮಾನ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಘೋಷಿಸಿದೆ.

ಈ ವಿಷಯದಲ್ಲಿ ಇದ್ದ ಗೊಂದಲ ನಿವಾರಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಲವು ಸುತ್ತಿನ ಸಭೆ
ಗಳನ್ನು ನಡೆಸಿದ್ದರು. ಅವರ ನಿರ್ದೇಶನದ ಮೇರೆಗೆ ಇಲಾಖೆ ಈ ತೀರ್ಮಾನ ಕೈಗೊಂಡಿದೆ.

ನೇಮಕಾತಿ ಮತ್ತು ಉನ್ನತ ಶಿಕ್ಷಣ ಪಡೆಯಲು ಪಿಯುಸಿ ಉತ್ತೀರ್ಣ ಮಾನದಂಡವಾಗಿತ್ತು. ಇನ್ನು ಮುಂದೆ ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ‌ಅವಕಾಶ ಪಡೆಯಲು ಹಾಗೂ ಉನ್ನತ ಶಿಕ್ಷಣದ ಪ್ರವೇಶಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ
ಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿಯುಸಿಗೆ ಸಮಾನ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

2015ಕ್ಕಿಂತ ಮೊದಲು ಡಿಪ್ಲೊಮಾ ಕೋರ್ಸ್‌ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್‌ಸಿ ನಡೆಸುವ ಇಲಾಖಾ‌ ಪರೀಕ್ಷೆಗಳ‌ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯ‌ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.