ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಎಂಬಿಎ, ಎಂಟೆಕ್ ಯಾವುದು ಸೂಕ್ತ?

ಪ್ರದೀಪ್‌ ಕುಮಾರ್‌ ವಿ
Published 17 ನವೆಂಬರ್ 2024, 23:30 IST
Last Updated 17 ನವೆಂಬರ್ 2024, 23:30 IST
   
ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಎಂಬಿಎ, ಎಂಟೆಕ್ ಯಾವುದು ಸೂಕ್ತ?

ಸರ್, ಈಗ ದ್ವಿತೀಯ ಪಿಯು ಮಾಡುತ್ತಿದ್ದು, ಮನೆಯವರು ಮುಂದೆ ಎಂಬಿಬಿಎಸ್ ಮಾಡು ಎನ್ನುತ್ತಿದ್ದಾರೆ. ಆದರೆ, ನನಗೆ ಎಂಜಿನಿಯರಿಂಗ್ ಮಾಡುವಾಸೆಯಿದೆ. ಈ ಗೊಂದಲಕ್ಕೆ ಪರಿಹಾರವೇನು? ಹೆಸರು, ಊರು ತಿಳಿಸಿಲ್ಲ.

ವೈದ್ಯರಾಗಲು ಸೇವಾ ಮನೋಭಾವ, ಜ್ಞಾಪಕ ಶಕ್ತಿ, ನಿಷ್ಠೆ, ಪ್ರಾಮಾಣಿಕತೆ, ಸಮಯದ ನಿರ್ವಹಣೆ, ವೃತ್ತಿ ಮತ್ತು ವೈಯಕ್ತಿಕ ಬದುಕಿನ ಸಮತೋಲನ ಅಗತ್ಯವಾದರೆ, ಎಂಜಿನಿಯರಿಂಗ್ ವೃತ್ತಿಗೆ ಗಣಿತದಲ್ಲಿ ತಜ್ಞತೆ, ವಿಶ್ಲೇಷಾತ್ಮಕ ಕೌಶಲ, ಯೋಜನೆಯ ನಿರ್ವಹಣೆ, ತಾಂತ್ರಿಕ ಕೌಶಲ ಅಗತ್ಯವಾಗುತ್ತದೆ. ಹಾಗಾಗಿ, ಸ್ವಾಭಾವಿಕ ಪ್ರತಿಭೆ, ಆಸಕ್ತಿ, ಒಲವು ಮತ್ತು ಕೌಶಲಗಳ ಮೌಲ್ಯಮಾಪನ ಮಾಡಿ, ವೈಯಕ್ತಿಕ/ಕುಟುಂಬದ ಮೌಲ್ಯಗಳು, ಸವಾಲುಗಳು, ಅಗತ್ಯಗಳು, ಧ್ಯೇಯಗಳನ್ನು ಗುರುತಿಸಿ, ವೃತ್ತಿ ಮತ್ತು ಕೋರ್ಸ್ ಆಯ್ಕೆ ಮಾಡುವುದು ಸೂಕ್ತ. ವೃತ್ತಿಯೋಜನೆಯ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=AwlDno1YduQ
 

ಮುಂದಿನ ವರ್ಷ ಬಿ.ಟೆಕ್ ಮುಗಿಸುತ್ತಿದ್ದೇನೆ. ನಂತರ ಎಂಬಿಎ ಅಥವಾ ಎಂ.ಟೆಕ್ ಮಾಡುವ ಆಲೋಚನೆಯಿದೆ. ನಿರ್ಧಾರ ಮಾಡುವುದು ಹೇಗೆ?

ADVERTISEMENT

ಹೆಸರು, ಊರು ತಿಳಿಸಿಲ್ಲ.

ನೀವು ಬಿ.ಟೆಕ್ ಯಾವ ವಿಭಾಗದಲ್ಲಿ ಮಾಡುತ್ತಿದ್ದೀರಿ ಎಂದು ತಿಳಿಸಿಲ್ಲ. ನಿಮ್ಮ ಆಸಕ್ತಿ, ಅಭಿರುಚಿ ಮತ್ತು ಕೌಶಲಗಳ ಮೌಲ್ಯಮಾಪನ ಮಾಡಿ ಯಾವ ಕ್ಷೇತ್ರದಲ್ಲಿ ವೃತ್ತಿಯನ್ನು ರೂಪಿಸಿಕೊಳ್ಳಬೇಕೆಂದು ನಿರ್ಧರಿಸಿ. ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿಯಿದ್ದಲ್ಲಿ ಎಂ.ಟೆಕ್ ಮಾಡಬಹುದು; ಮ್ಯಾನೇಜ್‌ಮೆಂಟ್ ಕ್ಷೇತ್ರ ಅಥವಾ ಅನುಭವದ ನಂತರ ಸ್ವಂತ ಉದ್ದಿಮೆಯನ್ನು ಮಾಡುವ ಆಸಕ್ತಿಯಿದ್ದರೆ ಎಂಬಿಎ ಮಾಡಬಹುದು. ಎಂಬಿಎ ಕೋರ್ಸಿನಲ್ಲಿ ವೃತ್ತಿಗೂ, ಜೀವನಕ್ಕೂ ಅಗತ್ಯವಾದ ಅನೇಕ ಮೂಲಭೂತ ತತ್ವಗಳ, ಮೌಲ್ಯಗಳ ಕಲಿಕೆಯಾಗುವುದರಿಂದ, ವೃತ್ತಿ ಮತ್ತು ಖಾಸಗೀ ಜೀವನಗಳೆರಡರಲ್ಲೂ ಯಶಸ್ಸನ್ನು ಸಾಧಿಸಲು ಅನುಕೂಲವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೊ ವೀಕ್ಷಿಸಿ: 

https://www.youtube.com/watch?v=7ex7tjtoMlw

ವಿದ್ಯಾರ್ಥಿಗಳೇ, ನಿಮ್ಮ ಮುಂದಿನ ಕೋರ್ಸ್‌ ಮತ್ತು ಸೂಕ್ತವಾದ ವೃತ್ತಿಯ ಆಯ್ಕೆ ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳುವ ಬಗ್ಗೆ ಗೊಂದಲಗಳಿವೆಯೇ? ಹಾಗಿದ್ದರೆ ನಮಗೆ ಬರೆಯಿರಿ. ನಿಮ್ಮ ಪ್ರಶ್ನೆಗಳಿಗೆ ಶಿಕ್ಷಣತಜ್ಞ ಮತ್ತು ವೃತ್ತಿ ಸಲಹೆಗಾರ ವಿ. ಪ್ರದೀಪ್ ಕುಮಾರ್ ಉತ್ತರಿಸಲಿದ್ದಾರೆ. ಪ್ರಶ್ನೆಗಳನ್ನು shikshana@prajavani.co.in ಗೆ ಕಳಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.