ಬೆಂಗಳೂರು: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶವನ್ನು ಶುಕ್ರವಾರ ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುವುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ.
ಪರೀಕ್ಷೆಗಳು ಮಾರ್ಚ್ 9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ನಡೆದಿದ್ದವು. 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಚುನಾ
ವಣಾ ಪ್ರಕ್ರಿಯೆಗಳ ಮಧ್ಯೆಯೇ ಮೌಲ್ಯಮಾಪನ ಕಾರ್ಯವನ್ನು ಮಂಡಳಿಯು ಸುಸೂತ್ರವಾಗಿ ಪೂರ್ಣ
ಗೊಳಿಸಿ, ಫಲಿತಾಂಶ ಪ್ರಕಟಿಸುತ್ತಿದೆ.
ವಿದ್ಯಾರ್ಥಿಗಳು, ಪೋಷಕರು ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.