ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಆಹಾರ ತಂತ್ರಜ್ಞಾನಕ್ಕೆ ಬೇಡಿಕೆ ಹೇಗಿದೆ?

ಪ್ರದೀಪ್ ಕುಮಾರ್ ವಿ.
Published 18 ಆಗಸ್ಟ್ 2024, 23:30 IST
Last Updated 18 ಆಗಸ್ಟ್ 2024, 23:30 IST
   

ಹೆಸರು, ಊರು ತಿಳಿಸಿಲ್ಲ

ನಾನು ದ್ವಿತೀಯ ಪಿಯು ಮಾಡುತ್ತಿದ್ದು, ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳೇನು?

ಜೀವನ ಶೈಲಿ ಮತ್ತು ಅಗತ್ಯಗಳು ಬದಲಾಗಿರುವ ಈ ಕಾಲಘಟ್ಟದಲ್ಲಿ ಸಿದ್ಧಪಡಿಸಿದ ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆಯಿದ್ದು ಆಹಾರ ವಿಜ್ಞಾನ ಮತ್ತು ಪುಷ್ಟಿ ವಿಜ್ಞಾನ (ನ್ಯೂಟ್ರಿಷನ್) ಮುಂಚೂಣಿಯಲ್ಲಿದೆ.

ADVERTISEMENT

ಕಚ್ಛಾ ಧಾನ್ಯಗಳು ಮತ್ತು ಇನ್ನಿತರ ಆಹಾರ ಪದಾರ್ಥಗಳ ಶುದ್ದೀಕರಣ, ಸಂಸ್ಕರಣೆ, ಸುರಕ್ಷತೆ ಮತ್ತು ಸೂಕ್ತ ಪ್ಯಾಕಿಂಗ್ ನಂತರ ಬಳಕೆಗೆ ಯೋಗ್ಯ ರೀತಿಯಲ್ಲಿ ಸಿದ್ಧಪಡಿಸುವ ಕಾರ್ಯಗಳಲ್ಲಿ ಆಹಾರ ವಿಜ್ಞಾನ, ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ, ಈ ಕ್ಷೇತ್ರದಲ್ಲಿ ಆಸಕ್ತಿಯಿದ್ದಲ್ಲಿ, ಬಿಏಸ್ಸಿ/ಬಿಟೆಕ್-ಫುಡ್ ಟೆಕ್ನಾಲಜಿ ಕೋರ್ಸ್ ಮಾಡಬಹುದು.

ಈ ಕೋರ್ಸ್ ನಂತರ, ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಆಹಾರ ಪದಾರ್ಥ ಮತ್ತು ಪಾನೀಯ ತಯಾರಿಕಾ ಉದ್ದಿಮೆಗಳು, ಆಹಾರ ಸಂಬಂಧಿತ ( ಸಂರಕ್ಷಕಗಳು, ಬಣ್ಣಗಳು ಮತ್ತು ಸ್ವಾದಗಳು ಇತ್ಯಾದಿ) ಉದ್ದಿಮೆಗಳು, ಕೃಷಿ ಉದ್ದಿಮೆಗಳು, ಸಾವಯವ ಉದ್ದಿಮೆಗಳು, ಹೋಟೆಲ್ಸ್ ಮತ್ತು ರೆಸ್ಟೋರೆಂಟ್ಸ್, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು, ಆಹಾರ ಪರೀಕ್ಷಾ ಪ್ರಯೋಗಾಲಯಗಳು ಸೇರಿದಂತೆ ವಿಪುಲವಾದ ಉದ್ಯೋಗಾವಕಾಶಗಳಿವೆ. ಹೆಚ್ಚಿನ ತಜ್ಞತೆಗಾಗಿ, ಎಂಎಸ್ಸಿ/ಎಂಟೆಕ್ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.