ಧಾರವಾಡ: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಧಾರವಾಡ ಜಿಲ್ಲೆಯು ಶೇ 80.70 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 23ನೇ ಸ್ಥಾನ ಪಡೆದಿದೆ.
ಹುಬ್ಬಳ್ಳಿಯ ಭೈರಿದೇವರಕೊಪ್ಪದ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮಿ 600ಕ್ಕೆ 598 ಅಂಕ (ಶೇ 99.66) ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಧಾರವಾಡದ ಮಾಳಮಡ್ಡಿಯ ಕೆಇಬಿ ಸಂಯುಕ್ತ ಪಿಯು ಕಾಲೇಜಿನ ವಿದ್ಯಾರ್ಥಿನಿ ರವಿನಾ ಲಮಾಣಿ 595 (ಶೇ 99.16) ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕಳೆದ ಬಾರಿ ಧಾರವಾಡ ಜಿಲ್ಲೆಯ ಶೇ 73.54 ಫಲಿತಾಂಶ ದಾಖಲಿಸಿ 27ನೇ ಸ್ಥಾನದಲ್ಲಿತ್ತು. ಈ ಬಾರಿ ನಾಲ್ಕು ಸ್ಥಾನ ಮೇಲಕ್ಕೆ ಜಿಗಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.