ಮಂಗಳೂರು: ದ್ಚಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಕಾಯ್ದುಕೊಂಡಿದೆ. ಜಿಲ್ಲೆಯಲ್ಲಿ ಈ ಬಾರಿ ಶೇ 97.37 ಫಲಿತಾಂಶ ದಾಖಲಾಗಿದೆ.
2021-22ನೇ ಸಾಲಿನಿಂದ ಸತತವಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ 95.33 ಫಲಿತಾಂಶ, 2021-22ನೇ ಸಾಲಿನಲ್ಲಿ ಶೇ 88.02 ಫಲಿತಾಂಶ ದಾಖಲಾಗಿತ್ತು.
ಕೋವಿಡ್ 19 ಸಾಂಕ್ರಾಮಿಕದ ಕಾರಣಕ್ಕೆ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.