ಬೆಂಗಳೂರು: 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು
ಪ್ರಕಟವಾಗಲಿದೆ.
ಮಾರ್ಚ್ 25ರಿಂದ ಏ.6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಆಯಾ ವಿಷಯ ಗಳ ಪರೀಕ್ಷೆಗಳು ಮುಗಿದ ಮರು ದಿನದಿಂದಲೇ ಮೌಲ್ಯಮಾಪನ ಕಾರ್ಯ ಆರಂಭಿಸಲಾಗಿತ್ತು. ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಬೆಳಿಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು.
ಫಲಿತಾಂಶ ವೀಕ್ಷಣೆ ಹೇಗೆ?
ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.
4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರೂ ಸೇರಿದಂತೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಇದೇ ಮೊದಲ ಬಾರಿ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಮೇ ಮೂರನೇ ವಾರದಲ್ಲೇ ಎರಡನೇ ಪರೀಕ್ಷೆ ಆರಂಭವಾಗಲಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ಉಳಿದ ಎರಡು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುತ್ತವೆಯೋ ಅದರ ಅಂಕಪಟ್ಟಿ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.