ಬೆಂಗಳೂರು: ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುತ್ತಿರುವ 25 ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ರಾಜ್ಯದಲ್ಲಿ ಪ್ರಸ್ತುತ 2,404 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಹಾಗೂ ಉರ್ದು ಮಾಧ್ಯಮದ ಜತೆಗೆ, ಆಂಗ್ಲ ಮಾಧ್ಯಮ ತರಗತಿಗಳಿಗೂ ಅವಕಾಶ ನೀಡಲಾಗಿದೆ. 2024–25ನೇ ಸಾಲಿನಲ್ಲಿ 1,419 ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈಗ ಹೆಚ್ಚುವರಿ ವಿಭಾಗ ತೆರೆಯಲು ಸಮ್ಮತಿ ನೀಡಲಾಗಿದ್ದು, ಆರ್ಥಿಕ ಹೊರೆಯಾಗದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.