ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಎಂಜಿನಿಯರಿಂಗ್‌, ಎಂಬಿಬಿಎಸ್‌ ಆಯ್ಕೆ ಹೇಗೆ?

ಪ್ರದೀಪ್‌ ಕುಮಾರ್‌ ವಿ
Published 1 ಸೆಪ್ಟೆಂಬರ್ 2024, 23:30 IST
Last Updated 1 ಸೆಪ್ಟೆಂಬರ್ 2024, 23:30 IST
   

ಹೆಸರು, ಊರು ತಿಳಿಸಿಲ್ಲ.

ನಾನು ಪಿಯು ಮುಗಿಸಿದ್ದು, ಈಗ ಎಂಜಿನಿಯರಿಂಗ್ (ಕಂಪ್ಯೂಟರ್ ವಿಜ್ಞಾನ) ಮತ್ತು ಎಂಬಿಬಿಎಸ್ ಎರಡರಲ್ಲೂ ಸರ್ಕಾರಿ ಸೀಟ್ ಸಿಗುವ ಸಾಧ್ಯತೆಯಿದೆ. ಆದರೆ, ಇವೆರಡರ ಆಯ್ಕೆಯಲ್ಲಿ ಗೊಂದಲವಿದ್ದು, ಮಾರ್ಗದರ್ಶನ ನೀಡಿ. 

ಎರಡೂ ಆಯ್ಕೆಗಳು ಉತ್ತಮವಾದದ್ದಾದರೂ,  ಯಾವುದು ಹೆಚ್ಚು ಸೂಕ್ತವೆಂದು ಮೌಲ್ಯಮಾಪನ ಮಾಡಬೇಕು. ವೈದ್ಯರಾಗಲು ಸೇವಾ ಮನೋಭಾವ, ಜ್ಞಾಪಕ ಶಕ್ತಿ, ನಿಷ್ಠೆ, ಪ್ರಾಮಾಣಿಕತೆ, ಸಮಯದ ನಿರ್ವಹಣೆ, ವೃತ್ತಿ ಮತ್ತು ವೈಯಕ್ತಿಕ ಬದುಕಿನ ಸಮತೋಲನ ಅಗತ್ಯವಾದರೆ, ಎಂಜಿನಿಯರಿಂಗ್ ವೃತ್ತಿಗೆ ಗಣಿತದಲ್ಲಿ ತಜ್ಞತೆ, ವಿಶ್ಲೇಷಾತ್ಮಕ ಕೌಶಲ, ಯೋಜನೆಯ ನಿರ್ವಹಣೆ, ತಾಂತ್ರಿಕ ಕೌಶಲದ ಅಗತ್ಯವಿರುತ್ತದೆ. ಹಾಗಾಗಿ, ನಿಮ್ಮ ಸ್ವಾಭಾವಿಕ ಪ್ರತಿಭೆ, ಆಸಕ್ತಿ, ಒಲವು ಮತ್ತು ಕೌಶಲಗಳ ಮೌಲ್ಯಮಾಪನ ಮಾಡಿ, ವೈಯಕ್ತಿಕ/ಕುಟುಂಬದ ಮೌಲ್ಯಗಳು, ಸವಾಲುಗಳು, ಅಗತ್ಯಗಳು, ಧ್ಯೇಯಗಳನ್ನು ಗುರುತಿಸಿ, ವೃತ್ತಿಯ ಆಯ್ಕೆಯನ್ನು ಮಾಡುವುದು ಸೂಕ್ತ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.