ADVERTISEMENT

ನಬಾರ್ಡ್‌: 170 ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 12:15 IST
Last Updated 19 ಜುಲೈ 2022, 12:15 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ನಲ್ಲಿ (ನಬಾರ್ಡ್‌) ಖಾಲಿ ಇರುವ 17 ಅಸಿಸ್ಟೆಂಟ್ ಮ್ಯಾನೇಜರ್‌ (ಗ್ರೇಡ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 170 ಹುದ್ದೆಗಳು

ವಿದ್ಯಾರ್ಹತೆ: ಪದವಿಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ನೇಮಕಾತಿಯ ಅಧಿಸೂಚನೆ ನೋಡುವುದು.

ADVERTISEMENT

ವಯಸ್ಸು: 2022ಕ್ಕೆ ಅನ್ವಯವಾಗುವಂತೆ 21ರಿಂದ 35 ವರ್ಷದೊಳಗಿನವರಾಗಿರಬೇಕು.

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ (1 ಜುಲೈ 2021ಕ್ಕೆ ಅನ್ವಯವಾಗುವಂತೆ). ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ನೇಮಕಾತಿಯು ಮೂರು ಹಂತಗಳಲ್ಲಿ ನಡೆಯಲಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹100. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹800.

ಅರ್ಜಿ ಸಲ್ಲಿಸಲು ಕೊನೆಯ ದಿನ: 07, ಆಗಸ್ಟ್‌ 2022.

ಹೆಚ್ಚಿನ ಮಾಹಿತಿಗೆ: www.nabard.org

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.