ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕ ರೀತಿಯ ಶುಲ್ಕ ನಿಗದಿ ಮಾಡಬೇಕು ಎಂದು ವಿಧಾನ ಮಂಡಲದ ಕಾಗದ ಪತ್ರ ಸಮಿತಿ ಶಿಫಾರಸು ಮಾಡಿದೆ.
ತುಮಕೂರು ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳಿಗೆ ಸಮಿತಿ ಭೇಟಿ ನೀಡಿ ಪರಿಶೀಲಿಸಿದಾಗ ಬೋಧನಾ ಶುಲ್ಕ, ಪರೀಕ್ಷಾ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ಸ್ವೇಚ್ಛಾನುಸಾರ, ಮುಂದಾಲೋಚನೆ ಇಲ್ಲದೆ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಪರೀಕ್ಷಾ ಶುಲ್ಕವನ್ನು ಬೋಧನಾ ಶುಲ್ಕಕ್ಕಿಂತ ಹೆಚ್ಚಾಗಿ ಸಂಗ್ರಹಿಸಲಾಗಿದೆ. ವಿಶ್ವವಿದ್ಯಾಲಯಮಟ್ಟ
ದಲ್ಲಿ ಯಾವುದೇ ಕ್ರೀಡೆ ಆಯೋಜಿಸದೇ ಇದ್ದರೂ ಕ್ರೀಡಾ ಶುಲ್ಕ ಪಡೆಯಲಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.