ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಕ್ಕೆ ಸೇರಿದ ಪರವಾನಗಿ ಹೊಂದಿರುವ ಎಲ್ಲ ಲಘು ವಾಹನಗಳ ಚಾಲಕರ ಮಕ್ಕಳಿಗೆ ಆರ್ಥಿಕ ಬೆಂಬಲ ನೀಡುವುದಕ್ಕಾಗಿ ಮಹೀಂದ್ರಾ ಫೈನಾನ್ಸ್ ಕಂಪನಿ ‘ಸಕ್ಷಮ್ ಸ್ಕಾಲರ್‌ಷಿಪ್ ಪ್ರೋಗ್ರಾಂ ಫಾರ್ ಡ್ರೈವರ್ಸ್ ಚಿಲ್ಡ್ರನ್’ ಯೋಜನೆ ರೂಪಿಸಿದೆ.
ಚಾಲನಾ ಪರವಾನಗಿ ಹೊಂದಿರುವ ಎಲ್ಲ ಲಘು ಮೋಟಾರು ವಾಹನಗಳು ಮತ್ತು ಟ್ಯಾಕ್ಸಿ, ಜೀಪ್, ಕಾರ್, ಪಿಕ್‌ಅಪ್, ಮ್ಯಾಜಿಕ್, ಸ್ಕೂಲ್ ವ್ಯಾನ್ ಇತ್ಯಾದಿ ಡೆಲಿವರಿ ವಾಹನದಂತಹ ಸಣ್ಣ ವಾಣಿಜ್ಯ ವಾಹನಗಳ ಚಾಲಕರ ಮಕ್ಕಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಹತೆ: ಕರ್ನಾಟಕ, ಆಂಧ್ರ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* 1 ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಹಂತದವರೆ ಓದುತ್ತಿರುವರೆಲ್ಲರೂ ಅರ್ಜಿ ಸಲ್ಲಿಸಬಹುದು.
* 9 ಮತ್ತು ಅದಕ್ಕಿಂತ ಹೆಚ್ಚಿನ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ತಮ್ಮ ಹಿಂದಿನ ತರಗತಿಯಲ್ಲಿ ಶೇ 60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 3ಲಕ್ಷ ಕ್ಕಿಂತ ಹೆಚ್ಚಿರಬಾರದು.
ಪೋಷಕರಲ್ಲಿ ಒಬ್ಬರು ಚಾಲಕರಾಗಿರಬೇಕು ಮತ್ತು ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಆರ್ಥಿಕ ನೆರವು : ಒಂದು ವರ್ಷಕ್ಕೆ ₹5 ಸಾವಿರದಿಂದ ₹20 ಸಾವಿರದವರೆಗಿನ ವಿದ್ಯಾರ್ಥಿ ವೇತನ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ.
ಅರ್ಜಿ ಸಲ್ಲಿಸಲು ಕೊನೆ ದಿನ: ಸೆಪ್ಟೆಂಬರ್ 30, 2023
ಹೆಚ್ಚಿನ ಮಾಹಿತಿಗೆ: www.b4s.in/praja/SKSP5
ಎಚ್‌ಡಿಎಫ್‌ಸಿ: ಪರಿವರ್ತನ್ಸ್ ಪ್ರೊಗ್ರಾಂ
ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಓದುತ್ತಿರುವ ಹಿಂದುಳಿದ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವುದಕ್ಕಾಗಿ ಎಚ್‌ಡಿಎಫ್‌ಸಿ ಬ್ಯಾಂಕ್ ‘ಪರಿವರ್ತನ್ಸ್ ಇಸಿಎಸ್‌ಎಸ್ ಪ್ರೊಗ್ರಾಂ‘ ರೂಪಿಸಿದೆ.
ಅರ್ಹತೆ:
* 1 ರಿಂದ ಸ್ನಾತಕೋತ್ತರ ಪದವಿವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ (ಸಾಮಾನ್ಯ ಮತ್ತು ವೃತ್ತಿಪರ ಸೇರಿದಂತೆ) ಕೋರ್ಸ್‌ಗಳಲ್ಲಿ ಓದುತ್ತಿರುವವರೂ ಅರ್ಜಿ ಸಲ್ಲಿಸಬಹುದು.
* ಅರ್ಜಿದಾರರು ತಮ್ಮ ಹಿಂದಿನ ವರ್ಷದ ತರಗತಿಯಲ್ಲಿ ಶೇ 55 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
* ಕಳೆದ ಮೂರು ವರ್ಷಗಳಲ್ಲಿ ವೈಯಕ್ತಿಕ ಅಥವಾ ಕೌಟುಂಬಿಕ ಬಿಕ್ಕಟ್ಟಿನಿಂದಾಗಿ ಶಿಕ್ಷಣ ವೆಚ್ಚ ಭರಿಸಲಾಗದೇ, ಶಿಕ್ಷಣವನ್ನು ಮೊಟಕುಗೊಳಿಸುವಂತಹ ಪರಿಸ್ಥಿತಿಯಲ್ಲಿರುವ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು.
ಆರ್ಥಿಕ ನೆರವು : ₹ 75 ಸಾವಿರದವರೆಗೆ
ಅರ್ಜಿ ಸಲ್ಲಿಕೆಗೆ ಕೊನೆದಿನ: ಸೆಪ್ಟೆಂಬರ್ 30, 2023
ಅರ್ಜಿ ಸಲ್ಲಿಕೆ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ: www.b4s.in/praja/HDFC44
ಕೃಪೆ: www.buddy4study.comv
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.