ವೆಸ್ಟರ್ನ್ ಡಿಜಿಟಲ್ ಸ್ಕಾಲರ್‌ಷಿಪ್
ಇದು ವೆಸ್ಟರ್ನ್ ಡಿಜಿಟಲ್‌ನ ಸಿಎಸ್‌ಆರ್ ಉಪಕ್ರಮವಾಗಿದ್ದು, ಲಿಂಗಪರಿವರ್ತಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶ ಹೊಂದಿದೆ.
ಅರ್ಹತೆ: ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಎಚ್.ಡಿ ಪದವಿ ಮಾಡುತ್ತಿರುವ ಲಿಂಗಪರಿವರ್ತಿತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅರ್ಜಿದಾರರು ತಮ್ಮ ಹಿಂದಿನ ಸೆಮಿಸ್ಟರ್ ಅಥವಾ ಹಿಂದಿನ ತರಗತಿಯಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳನ್ನು ಗಳಿಸಿರಬೇಕು. ಭಾರತದಾದ್ಯಂತ ವಿದ್ಯಾರ್ಥಿಗಳಿಗೆ ಲಭ್ಯವಿದೆ. ವೆಸ್ಟರ್ನ್ ಡಿಜಿಟಲ್ ಮತ್ತು ಬಡ್ಡಿ4ಸ್ಟಡಿಯ ಉದ್ಯೋಗಿಗಳ ಮಕ್ಕಳು ಅರ್ಹರಾಗಿರುವುದಿಲ್ಲ.
ಅರ್ಹತೆ: ₹75,000ದವರೆಗಿನ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಸಲು ಕೊನೆ ದಿನ: 27-11-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: Short Url: www.b4s.in/pjvi/WDSP1
ನಿಕಾನ್ ಸ್ಕಾಲರ್‌ಷಿಪ್
ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ-ಸಂಬಂಧಿತ ಕೋರ್ಸ್‌ಗಳನ್ನು ಅಭ್ಯಾಸ ಮಾಡಲು ಆರ್ಥಿಕವಾಗಿ ಬೆಂಬಲ ನೀಡಲಿದೆ.
ಅರ್ಹತೆ: 12ನೇ ತರಗತಿಯನ್ನು ಪೂರ್ಣಗೊಳಿಸಿರುವ ಮತ್ತು ಮೂರು ತಿಂಗಳು ಅಥವಾ ಹೆಚ್ಚಿನ ಸಮಯದ ಛಾಯಾಗ್ರಹಣ-ಸಂಬಂಧಿತ ಕೋರ್ಸ್ ಗಳನ್ನು ಅಭ್ಯಾಸ ಮಾಡುತ್ತಿರುವಂಥ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಕುಟುಂಬದ ವಾರ್ಷಿಕ ಆದಾಯವು (ಎಲ್ಲಾ ಮೂಲಗಳಿಂದ) ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ₹ 10,000ದವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ: 30-11-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ಹೆಚ್ಚಿನ ಮಾಹಿತಿಗೆ: Short Url: www.b4s.in/pjvi/NIKON12
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.