ನವದೆಹಲಿ:ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ಭಯದ ವಾತಾವರಣವನ್ನು ತೊಡೆದುಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿರ‍್ಯಾಗಿಂಗ್ ವಿರೋಧಿ ಸಮಿತಿ ರಚನೆ, ವಿದ್ಯಾರ್ಥಿಗಳೊಂದಿಗೆ ನಿಯಮಿತ ಸಂವಹನ ಮತ್ತು ಸಮಾಲೋಚನೆ ಹಾಗೂ ವಿದ್ಯಾರ್ಥಿನಿಲಯಗಳಿಗೆ ಹಠಾತ್ ಭೇಟಿ ಮುಂತಾದವು ಸೇರಿವೆ.
ವಿದ್ಯಾರ್ಥಿಗಳೊಂದಿಗೆ ನಿಯಮಿತ ಸಂವಹನ ಮತ್ತು ಸಮಾಲೋಚನೆಯಿಂದ ರ‍್ಯಾಗಿಂಗ್ ಅನ್ನು ಮೊದಲ ಹಂತದಲ್ಲೇ ಪತ್ತೆ ಮಾಡಬಹುದು. ಹಾಸ್ಟೆಲ್, ಕ್ಯಾಂಟೀನ್, ಶೌಚಾಲಯ, ವಿಶ್ರಾಂತಿ ಕೊಠಡಿ, ಬಸ್ ನಿಲ್ದಾಣಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕವೂ ರ್‍ಯಾಗಿಂಗ್ ಅಥವಾ ಅಹಿತಕರ ವರ್ತನೆಗಳನ್ನು ನಿಯಂತ್ರಿಸಬಹುದು ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ವಿಶ್ವವಿದ್ಯಾಲಯಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.
ಹಾಗೆಯೇ ರ‍್ಯಾಗಿಂಗ್ ವಿರೋಧಿ ಸಮಿತಿ, ರ‍್ಯಾಗಿಂಗ್ ವಿರೋಧಿ ದಳ ರಚನೆ ಮಾಡಿ ವಿವಿಧ ಮಾಧ್ಯಮಗಳ ಮೂಲಕ ಹೆಚ್ಚು ಪ್ರಚಾರ ನೀಡಿ ಅರಿವು ಮೂಡಿಸಬೇಕು. ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ರ‍್ಯಾಗಿಂಗ್ ವಿರೋಧಿ ಸಮಿತಿಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳ ಸಂಪೂರ್ಣ ವಿಳಾಸ ಮತ್ತು ಸಂಪರ್ಕ ಸಂಖ್ಯೆ ಲಭಿಸುವಂತೆ ಅಪ್‌ಡೇಟ್ ಮಾಡಬೇಕು. ರ‍್ಯಾಗಿಂಗ್ ವಿರೋಧಿ ಕಾರ್ಯಾಗಾರ, ಸೆಮಿನಾರ್‌ಗಳನ್ನು ಆಯೋಜಿಸಬೇಕು ಎಂದು ಯುಜಿಸಿ ಸಲಹೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.