ADVERTISEMENT

ಕ್ಷೇತ್ರ ಮಹಾತ್ಮೆ | ವಯನಾಡ್‌ ಲೋಕಸಭಾ ಕ್ಷೇತ್ರ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 23:50 IST
Last Updated 22 ಮಾರ್ಚ್ 2024, 23:50 IST
ವಯನಾಡ್‌
ವಯನಾಡ್‌   

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಣಕ್ಕಿಳಿದಿರುವುದರಿಂದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರವು ಈ ಬಾರಿಯೂ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಕ್ಷೇತ್ರದಲ್ಲಿ ಕಳೆದ ಬಾರಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಆಡಳಿತಾರೂಢ ಎಲ್‌ಡಿಎಫ್‌ ಮೈತ್ರಿಕೂಟದ ಜೊತೆಗಿರುವ ಸಿಪಿಐ, ಈ ಬಾರಿ ಆನಿ ರಾಜಾ ಅವರನ್ನು ಸ್ಪರ್ಧೆಗಿಳಿಸುವ ಮೂಲಕ ಕಣವನ್ನು ಇನ್ನಷ್ಟು ರಂಗೇರಿಸಿದೆ.

ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರ ಪತ್ನಿ ಆನಿ ಅವರು ಸಿಪಿಐ ಮಹಿಳಾ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಹೌದು. ಹಲವು ಹೋರಾಟಗಳ ಮೂಲಕ ಮುಂಚೂಣಿಗೆ ಬಂದಿರುವ ಆನಿ ಅವರು ರಾಹುಲ್‌ ಅವರಿಗೆ ಪ್ರಬಲ ಸ್ಪರ್ಧೆ ನೀಡಲು ಮುಂದಾಗಿದ್ದಾರೆ.

ಬಿಜೆಪಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ಲಾ ಕುಟ್ಟಿ ಅವರನ್ನು ಅಖಾಡಕ್ಕೆ ಇಳಿಸುವ ಮೂಲಕ ಮುಸ್ಲಿಮರ ಮತಗಳ ಮೇಲೆ ಕಣ್ಣಿಟ್ಟಿದೆ.  ಈ ಬಾರಿ ರಾಹುಲ್‌ ಗಾಂಧಿ ಅವರನ್ನು ವಯನಾಡ್‌ನಿಂದ ಸ್ಪರ್ಧೆಗಿಳಿಸಬಾರದು ಎಂದು ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಸಿಪಿಎಂ, ಕಾಂಗ್ರೆಸ್‌ಅನ್ನು ಆರಂಭದಿಂದಲೇ ಒತ್ತಾಯಿಸಿತ್ತು. ಆದರೆ ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ಮತ್ತು ಪಕ್ಷಕ್ಕೆ ಸುರಕ್ಷಿತ ಕ್ಷೇತ್ರವೆಂದು ಕಂಡುಕೊಂಡಿರುವ ಕಾರಣ ಕಾಂಗ್ರೆಸ್‌, ರಾಹುಲ್‌ ಅವರನ್ನೇ ಮತ್ತೆ ಕಣಕ್ಕಿಳಿಸಿದೆ.

ADVERTISEMENT

‘ಇಂಡಿಯಾ’ ಒಕ್ಕೂಟದ ಜೊತೆಗೆ ಗುರುತಿಸಿಕೊಂಡರೂ, ಕೇರಳದಲ್ಲಿ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್‌ಗೆ ಸಿಪಿಎಂ ಪಕ್ಷ ಮತ್ತು ಅದರ ನೇತೃತ್ವದ ಎಲ್‌ಡಿಎಫ್‌ ಮೈತ್ರಿಕೂಟವು ಪ್ರಬಲ ಸ್ಪರ್ಧೆ ನೀಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.