ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 1:14 IST
Last Updated 22 ಏಪ್ರಿಲ್ 2024, 1:14 IST
ಚಿದಂಬರಂ
ಚಿದಂಬರಂ   

‘ಇಂಡಿಯಾ’ ಒಕ್ಕೂಟವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಸಂಸತ್‌ನ ಮೊದಲ ಅಧಿವೇಶನದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದು ಮಾಡಲಿದೆ. ಪ್ರಣಾಳಿಕೆಯಲ್ಲಿ ಉಲ್ಲೇಖಿಸದಿದ್ದರೂ ಸಿಎಎಯನ್ನು ರದ್ದುಗೊಳಿಸುವುದು ಕಾಂಗ್ರೆಸ್‌ ಪಕ್ಷದ ಉದ್ದೇಶವಾಗಿದೆ. ಪ್ರಣಾಳಿಕೆಯು ಸುದೀರ್ಘವಾಗುತ್ತದೆ ಎಂಬ ಕಾರಣಕ್ಕೆ ಸಿಎಎ ಉಲ್ಲೇಖವನ್ನು ಕೈಬಿಡಲಾಗಿತ್ತು. 10 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿಯು ದೇಶಕ್ಕೆ ಅಪಾರ ಹಾನಿಯುಂಟುಮಾಡಿದೆ. ತನಗೆ ಲಭಿಸಿದ್ದ ಬಹುಮತವನ್ನು ದುರುಪಯೋಗಪಡಿಸಿಕೊಂಡಿದೆ.

–ಪಿ.ಚಿದಂಬರಂ, ಕಾಂಗ್ರೆಸ್‌ ಮುಖಂಡ

***

ADVERTISEMENT

ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿಯು ಸ್ಥಿರ ಸರ್ಕಾರವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಶರದ್‌ ಪವಾರ್‌ ಬಣ ಮತ್ತು ಶಿವಸೇನಾ ಉದ್ಧವ್‌ ಠಾಕ್ರೆ ಬಣ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಕುಟುಂಬ ರಾಜಕಾರಣವನ್ನು ಉಳಿಸಲು ಪ್ರಯತ್ನಿಸುತ್ತಿವೆ. ವಸತಿ ರಹಿತ ಜನರಿಗೆ ಸಾವಿರಾರು ಮನೆಗಳನ್ನು ಒದಗಿಸಲಾಗಿದೆ. ಗ್ರಾಮೀಣ ಪ್ರದೇಶ‌ದ ಜನರ ಬದುಕನ್ನು ಹಸನುಗೊಳಿಸಲಾಗಿದೆ.

–ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.