ದೇಶದ ಒಟ್ಟು ನಿರುದ್ಯೋಗಿಗಳಲ್ಲಿ ಶೇ 83ರಷ್ಟು ಯುವಕರೇ ಏಕೆ ಇದ್ದಾರೆ? ವಾರ್ಷಿಕ 2 ಕೋಟಿ ಉದ್ಯೋಗ ನೀಡುವ ವಿಚಾರ ಏನಾಯಿತು? ದೇಶದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಏಕೆ ಖಾಲಿ ಇವೆ? ಪ್ರತೀ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿರುವುದು ಏಕೆ? ಉದ್ಯಮಿಗಳ ₹16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಲಾಗಿದೆ. ಆದರೆ ಸಾಲದ ಹೊರೆಯಿಂದ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? ದಲಿತರು, ಹಿಂದುಳಿದ ವರ್ಗದವರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸೂಕ್ತ ಪ್ರಾತಿನಿಧ್ಯ ಏಕಿಲ್ಲ? ಹಣದುಬ್ಬರ ಏಕೆ ಉತ್ತುಂಗದಲ್ಲಿದೆ ಮತ್ತು ಕುಟುಂಬ ನಿರ್ವಹಣೆ ಏಕೆ ಕಷ್ಟಕರವಾಗಿದೆ?
- ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ನಾಯಕಿ
ಪ್ರಧಾನಿ ನರೇಂದ್ರ ಮೋದಿ ಅವರು ‘ಅಬ್‌ಕಿ ಬಾರ್ 400 ಪಾರ್’ (ಈ ಬಾರಿ 400ಕ್ಕೂ ಅಧಿಕ ಸ್ಥಾನಗಳು) ಎಂಬ ಘೋಷಣೆಯನ್ನು ಮೊಳಗಿಸಿದ್ದಾರೆ. ಸಂವಿಧಾನದ ವಿಧಿ 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಅವರ ನಾಯಕತ್ವದಲ್ಲಿ ರದ್ದುಪಡಿಸಲಾಗಿದೆ. ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲು ಪ್ರತಿ ಮತಗಟ್ಟೆಗಳಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕಿದ್ದ ಮತಗಳಿಗಿಂತ 370 ಮತಗಳು ಹೆಚ್ಚುವರಿಯಾಗಿ ಸಿಗಲು ನಾವು ಕೆಲಸ ಮಾಡಬೇಕು
- ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.