ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 6 ಮೇ 2024, 0:27 IST
Last Updated 6 ಮೇ 2024, 0:27 IST
ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ಹೆಸರಿನಲ್ಲಿ ಮತಯಾಚಿಸುತ್ತಿದ್ದಾರೆ. ಅಭಿವೃದ್ಧಿ, ಹಣದುಬ್ಬರ, ಉದ್ಯೋಗದ ಕುರಿತು ಮಾತನಾಡುವುದಿಲ್ಲ. ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಉಗ್ರರು ನಡೆಸಿರುವ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಮೋದಿ ಅವರು ಅಯೋಧ್ಯೆಯಲ್ಲಿ ಈ ವಿಚಾರದ ಕುರಿತು ಮಾತನಾಡುವುದಿಲ್ಲ
-ಸಂಜಯ್‌ ರಾವುತ್‌, ಶಿವಸೇನಾ ಉದ್ಧವ್‌ ಠಾಕ್ರೆ ಬಣದ ಮುಖಂಡ
ಓಲೈಕೆಯ ರಾಜಕಾರಣಕ್ಕಾಗಿ ದಲಿತರು, ಬುಡಕಟ್ಟು ಮತ್ತು ಹಿಂದುಳಿದ ವರ್ಗದವರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಕಾರ್ಯಸೂಚಿಯಾಗಿದೆ. 2014ಕ್ಕಿಂತ ಮುಂಚೆ ಮತ ಬ್ಯಾಂಕ್‌ ರಾಜಕೀಯ, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ರಾಜಕಾರಣ ನಡೆಯುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಅದರ ವ್ಯಾಖ್ಯಾನವೇ ಬದಲಾಗಿದೆ
-ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಜೆ.ಪಿ. ನಡ್ಡಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.