ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ದೃಷ್ಟಿಯಿಂದ ಈ ಚುನಾವಣೆಯು ಮಹತ್ವದ್ದಾಗಿದೆ. ಜನರು ಈ ಹೋರಾಟದಲ್ಲಿ ಪಾಲ್ಗೊಂಡು ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ನಿಮ್ಮ ಪ್ರತಿ ಮತವು ಉದ್ಯೋಗ ಸೃಷ್ಟಿಸಲಿದೆ, ಹಣದುಬ್ಬರವನ್ನು ತಗ್ಗಿಸಲಿದೆ, ಮಹಿಳೆಯರ ಸಬಲೀಕರಣ ಮತ್ತು ಸಮಾನತೆಗೆ ಸಹಕಾರಿಯಾಗಲಿದೆ
-ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕಿ
(ದೆಹಲಿಯ ಜನರನ್ನುದ್ದೇಶಿಸಿದ ನೀಡಿದ ವಿಡಿಯೊ ಹೇಳಿಕೆ)
ದೆಹಲಿಯ ಎಲ್ಲ ಏಳು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ‘ಇಂಡಿ’ ಒಕ್ಕೂಟವು ಸಂಪೂರ್ಣವಾಗಿ ವಿಫಲವಾಗಿದೆ. ಆ ಒಕ್ಕೂಟಕ್ಕೆ ನಾಯಕರಿಲ್ಲದಂತಾಗಿದೆ. ಜನರು ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಪರ ಇದ್ದಾರೆ. ನಾವು ಖಂಡಿತವಾಗಿಯೂ 400ಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜನರ ನಂಬಿಕೆಗೆ ದ್ರೋಹ ಎಸಗಿದ್ದಾರೆ. ಅವರು ಕೆಲವು ದಿನಗಳಿಗಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಮತ್ತೆ ಜೈಲು ಸೇರಲಿದ್ದಾರೆ
-ಪೀಯೂಷ್ ಗೋಯಲ್, ಕೇಂದ್ರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.