ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಟ್ವಿಟರ್‌ನಲ್ಲಿ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಇಬ್ಬರು ನಾಯಕರ ನಡುವಣ ಟ್ವೀಟ್ ಸಮರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಐದು ವಿಷಯಗಳನ್ನು ಮುಂದಿಟ್ಟುಕೊಂಡು ಪ್ರಧಾನಿಯವರನ್ನು ಚರ್ಚೆಗೆ ಆಹ್ವಾನಿಸಿದ್ದಾರೆ.
‘ಪ್ರಧಾನಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಸಂತಸ ತಂದಿದೆ. ಈಗ ಅವರನ್ನು ಚರ್ಚೆಗೆ ಆಹ್ವಾನಿಸುತ್ತಿದ್ದೇನೆ.
1. ಲೋಕಪಾಲ ನೇಮಕಾತಿ ಮಾಡಿ
2. ನ್ಯಾಯಾಧೀಶ ಲೋಯಾ ಅವರ ಸಾವಿನ ತನಿಖೆ ಮಾಡಿ
3. ಜಯ್‌ಶಾ ಅವರ ಸಂಪತ್ತಿನಲ್ಲಿ ದಿಢೀರ್ ಏರಿಕೆಯಾಗಿರುವ ಬಗ್ಗೆ ತನಿಖೆ ನಡೆಸಿ
4. ಕಳಂಕವಿರದ ವ್ಯಕ್ತಿಯನ್ನು ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿ
ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.