ADVERTISEMENT

ಶೇ 16 ಅಭ್ಯರ್ಥಿಗಳ ವಿರುದ್ಧ ಗಂಭೀರ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಮೇ 2024, 18:45 IST
Last Updated 16 ಮೇ 2024, 18:45 IST
.
.   

ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ನಡೆಯಲಿರುವ 57 ಕ್ಷೇತ್ರಗಳಲ್ಲಿ 869 ಹುರಿಯಾಳುಗಳು ಕಣದಲ್ಲಿದ್ದಾರೆ. ಈ ಪೈಕಿ ಶೇ 16ರಷ್ಟು ಅಭ್ಯರ್ಥಿಗಳು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಶೇ 39ರಷ್ಟು ಕೋಟ್ಯಧಿಪತಿಗಳಾಗಿದ್ದಾರೆ. 

ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಗುರುವಾರ ವರದಿ ಪ್ರಕಟಿಸಿದೆ.

ಆರನೇ ಹಂತದಲ್ಲಿ ಕಣದಲ್ಲಿರುವ ಎಎಪಿಯ ಎಲ್ಲ ಐದು ಅಭ್ಯರ್ಥಿಗಳೂ ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ. ಬಿಜೆಪಿಯ 51 ಅಭ್ಯರ್ಥಿಗಳಲ್ಲಿ 28 ಮಂದಿ ಹಾಗೂ ಕಾಂಗ್ರೆಸ್‌ನ 25 ಅಭ್ಯರ್ಥಿಗಳಲ್ಲಿ ಎಂಟು ಮಂದಿ ವಿವಿಧ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ADVERTISEMENT

24 ಅಭ್ಯರ್ಥಿಗಳು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಅದರಲ್ಲಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಮೂವರು ಇದ್ದಾರೆ. 16 ಅಭ್ಯರ್ಥಿಗಳು ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣ ಎದುರಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. 

ಆರನೇ ಹಂತದ ಮತದಾನ ಮೇ 25 ರಂದು ನಡೆಯಲಿದೆ. 

ಆಧಾರ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.