ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಅಭ್ಯರ್ಥಿಯಾಗಿ ಅನಂತನಾಗ್–ರಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
2022ರಲ್ಲಿ ಕಾಂಗ್ರೆಸ್ ತೊರೆದಿದ್ದ ಆಜಾದ್ ಆವರು, ಬಳಿಕ ಡಿಪಿಎಪಿ ಪಕ್ಷವನ್ನು ಸ್ಥಾಪಿಸಿದ್ದರು.
‘ಆಜಾದ್ ಅವರನ್ನು ಅನಂತನಾಗ್–ರಜೌರಿ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷದ ಸಮನ್ವಯ ಸಮಿತಿ ತೀರ್ಮಾನಿಸಿದೆ’ ಎಂದು ಪಕ್ಷದ ಮುಖಂಡ ತಾಜ್ ಮೊಹಿಯುದ್ದೀನ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.