ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಹೆಚ್ಚಿನ ಕಾಲಾವಕಾಶ ಕೋರಿದ ಬಿಜೆಪಿ, ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 16:30 IST
Last Updated 29 ಏಪ್ರಿಲ್ 2024, 16:30 IST
..
..   

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಪಕ್ಷದ ಅಧ್ಯಕ್ಷರಿಗೆ ನೀಡಿರುವ ನೋಟಿಸ್‌ಗಳಿಗೆ ಉತ್ತರಿಸಲು ಬಿಜೆಪಿ ಒಂದು ವಾರ ಹೆಚ್ಚಿನ ಕಾಲಾವಕಾಶ ಕೋರಿದ್ದರೆ, ಕಾಂಗ್ರೆಸ್ 14 ದಿನಗಳ ಹೆಚ್ಚುವರಿ ಸಮಯ ಕೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಆಯೋಗವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಸೋಮವಾರ ಮಧ್ಯಾಹ್ನ 11 ಗಂಟೆ ಒಳಗೆ ಅವಕ್ಕೆ ಉತ್ತರಿಸುವಂತೆ ಸೂಚಿಸಿತ್ತು.

ಕಾಂಗ್ರೆಸ್ ಮತ್ತು ಬಿಜೆಪಿಯ ಮನವಿಗೆ ಚುನಾವಣಾ ಆಯೋಗ ಸಮ್ಮತಿ ಸೂಚಿಸಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.