ADVERTISEMENT

LS Polls: ಕೇವಲ 3 ಅಭ್ಯರ್ಥಿಗಳನ್ನು ಒಳಗೊಂಡ ಆರನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಏಜೆನ್ಸೀಸ್
Published 26 ಮಾರ್ಚ್ 2024, 11:38 IST
Last Updated 26 ಮಾರ್ಚ್ 2024, 11:38 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇವಲ ಮೂರು ಅಭ್ಯರ್ಥಿಗಳ ಹೆಸರು ಇರುವ 6ನೇ ಪಟ್ಟಿಯನ್ನು ಬಿಜೆಪಿ ಮಂಗಳವಾರ ಬಿಡುಗಡೆ ಮಾಡಿದೆ.

ರಾಜಸ್ಥಾನ ಮತ್ತು ಮಣಿಪುರದ ಕ್ಷೇತ್ರಗಳನ್ನು ಈ ಪಟ್ಟಿ ಒಳಗೊಂಡಿದೆ. ರಾಜಸ್ಥಾನದ ದೌಸಾ ಕ್ಷೇತ್ರದಿಂದ ಕನ್ಹಯ್ಯಾ ಲಾಲ್ ಮೀನಾ, ಕರೌಲಿ–ಧೋಲ್ಪುರ್‌ ಕ್ಷೇತ್ರದಿಂದ ಇಂದೂ ದೇವಿ ಜಾಟವ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ADVERTISEMENT

ರಾಜಸ್ಥಾನದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿವೆ. ಏ. 19ರಂದು 12 ಕ್ಷೇತ್ರಗಳು ಮತ್ತು ಏ. 26ರಂದು 13 ಕ್ಷೇತ್ರಗಳು ಸೇರಿದಂತೆ ಒಟ್ಟು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.  

ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದಿಂದ ಥೌನೋಜಮ್ ಬಸಂತ ಕುಮಾರ್ ಸಿಂಗ್ ಅವರ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ. ಮಣಿಪುರದಲ್ಲೂ ಏ. 19 ಹಾಗೂ ಮೇ 26ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. 

ಇದಕ್ಕೂ ಮೊದಲು ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪಕ್ಷವು ಸೋಮವಾರ ಬಿಡುಗಡೆ ಮಾಡಿತ್ತು. ಈವರೆಗೂ ಕಾಂಗ್ರೆಸ್‌ 190 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ್ದರೆ, ಬಿಜೆಪಿ 405 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

543 ಲೋಕಸಭಾ ಕ್ಷೇತ್ರಗಳಿಗೆ ಏ. 19ರಿಂದ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಸುಮಾರು 97 ಕೋಟಿ ಮತದಾರರು ಈ ಬಾರಿ ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 303 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು. ಕಾಂಗ್ರೆಸ್‌ 52 ಕ್ಷೇತ್ರಗಳನ್ನು ಗೆದ್ದಿತ್ತು. 2014ರಲ್ಲಿ ಬಿಜೆಪಿ 282 ಕ್ಷೇತ್ರಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 44 ಕ್ಷೇತ್ರಗಳಲ್ಲಷ್ಟೇ ಗೆದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.