ADVERTISEMENT

ರಾಜಸ್ಥಾನ | ಎಲ್ಲ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಅಮಿತ್ ಶಾ

ಪಿಟಿಐ
Published 20 ಏಪ್ರಿಲ್ 2024, 9:13 IST
Last Updated 20 ಏಪ್ರಿಲ್ 2024, 9:13 IST
<div class="paragraphs"><p>ಅಮಿತ್ ಶಾ</p></div>

ಅಮಿತ್ ಶಾ

   

(ಪಿಟಿಐ ಚಿತ್ರ)

ಜೈಪುರ: ರಾಜಸ್ಥಾನದಲ್ಲಿ ಎಲ್ಲ 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಬಿಲ್ವಾರದಲ್ಲಿ ಪಕ್ಷದ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹಲೋತ್ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಗೆಹಲೋತ್ ಅವರ ಪುತ್ರ ವೈಭವ್ ಗೆಹಲೋತ್, ಜಲೋರ್ ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲು ಅನುಭವಿಸಲಿದ್ದಾರೆ ಎಂದು ಹೇಳಿದರು.

'ಲೋಕಸಭೆಗೆ ಮೊದಲ ಹಂತದ ಮತದಾನವು ಶುಕ್ರವಾರ ನಡೆದಿದೆ. ರಾಜಸ್ಥಾನದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿರುವ ಎಲ್ಲ 12 ಸ್ಥಾನಗಳು ಪ್ರಧಾನಿ ನರೇಂದ್ರ ಮೋದಿ ಅವರ ಪಾಲಾಗಲಿವೆ. ರಾಜಸ್ಥಾನವು ಮೂರನೇ ಸಲ ಪ್ರಧಾನಿ ಮೋದಿಗೆ ಎಲ್ಲ 25 ಸ್ಥಾನಗಳನ್ನು ನೀಡುವ ಮೂಲಕ ಹ್ಯಾಟ್ರಿಕ್ ಸಾಧಿಸಲಿದೆ' ಎಂದು ಅವರು ಹೇಳಿದರು.

ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಅವರು ಉಲ್ಲೇಖಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಕಾಂಗ್ರೆಸ್ ಧೋರಣೆಯನ್ನು ಅಮಿತ್ ಶಾ ಪ್ರಶ್ನಿಸಿದರು. 'ವೋಟ್ ಬ್ಯಾಂಕ್‌ ಕಳೆದುಕೊಳ್ಳುವ ಭೀತಿಯಿಂದಾಗಿ ಕಾಂಗ್ರೆಸ್ ಹೀಗೆ ಮಾಡಿದ್ದು, ಇದನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ' ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.