ADVERTISEMENT

LS Polls | ಪಂಜಾಬ್: ಬಿಜೆಪಿ ಏಕಾಂಗಿ ಸ್ಪರ್ಧೆ

ಪಿಟಿಐ
Published 26 ಮಾರ್ಚ್ 2024, 6:09 IST
Last Updated 26 ಮಾರ್ಚ್ 2024, 6:09 IST
   

ಚಂಡೀಗಢ: ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಬಿಜೆಪಿ ಪ್ರಕಟಿಸಿದೆ.

ಇದರೊಂದಿಗೆ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಜತೆ ಮೈತ್ರಿ ಮಾಡಿಕೊಳ್ಳದಿರಲು ಬಿಜೆಪಿ ನಿರ್ಧರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷ ಸುನಿಲ್ ಜಾಖಡ್, ಜನರ ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಮುಂದಾಳತ್ವದಲ್ಲಿ ಬಿಜೆಪಿ ಮಾಡಿದ ಕೆಲಸಗಳು ಯಾರಿಂದಲೂ ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಪಂಜಾಬ್‌ನಲ್ಲಿ 13 ಲೋಕಸಭಾ ಕ್ಷೇತ್ರಗಳ ಚುನಾವಣೆ ಜೂನ್ 1ರಂದು ನಡೆಯಲಿದೆ.

2019ರಲ್ಲಿ ಶಿರೋಮಣಿ ಅಕಾಲಿ ದಳ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿತ್ತು. 2020ರಲ್ಲಿ ಕೃಷಿ ಮಸೂದೆ ವಿಚಾರವಾಗಿ ಮುನಿಸಿಕೊಂಡಿದ್ದ ಶಿರೋಮಣಿ ಅಕಾಲಿ ದಳ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.