ಮುಂಬೈ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯ ಕುರಿತು ಪಕ್ಷದ ಮುಖವಾಣಿ 'ಸಾಮ್ನಾ' ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಜನರು ತಮ್ಮ ನಾಯಕರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಈಗಿನ ಸರ್ಕಾರವನ್ನು ಸೋಲಿಸಿದರೆ ದೇಶದ ಭವಿಷ್ಯವು ಶಾಂತಿಯುತವಾಗಿರುತ್ತದೆ ಮತ್ತು ಪ್ರಜಾಪ್ರಭುತ್ವವು ಅಭಿವೃದ್ಧಿಗೊಳ್ಳುತ್ತದೆ. ಇಲ್ಲದಿದ್ದರೆ ದೇಶವು ಕರಾಳ ದಿನಗಳನ್ನು ನೋಡುತ್ತದೆ. ಅಚ್ಚೇ ದಿನ್ (ಒಳ್ಳೆಯ ದಿನಗಳು) ಎಂದಿಗೂ ಬರಲಿಲ್ಲ, ಆದರೆ ಕರಾಳ ದಿನಗಳು ಬರುತ್ತವೆ' ಎಂದು ಅವರು ಪ್ರತಿಪಾದಿಸಿದ್ದಾರೆ.
ಭ್ರಷ್ಟರ ರಕ್ಷಣೆ ಮೋದಿ ಗ್ಯಾರಂಟಿಯಾಗಿದೆ. ಬಿಜೆಪಿಯು ಚುನಾವಣಾ ಭಾಷಣದಲ್ಲಿ ರಾಮನ ಹೆಸರು ಹೇಳುತ್ತಿದೆ. ಏಕೆಂದರೆ ಅಭಿವೃದ್ಧಿಯ ವಿಚಾರದಲ್ಲಿ ಹೇಳಿಕೊಳ್ಳುವಂತಹ ಸಾಧನೆ ಯಾವುದೂ ಇಲ್ಲ ಎಂದು ಕುಟುಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.