ADVERTISEMENT

ಲೋಕಸಭಾ ಚುನಾವಣೆ | ಬಿಜೆಪಿ, ಬಿಎಸ್‌ಪಿ ಗೋಪ್ಯವಾಗಿ ಒಂದಾಗಿವೆ: ಅಖಿಲೇಶ್‌ ಯಾದವ್

ಪಿಟಿಐ
Published 27 ಮೇ 2024, 15:53 IST
Last Updated 27 ಮೇ 2024, 15:53 IST
ಅಖಿಲೇಶ್‌ ಯಾದವ್‌
ಅಖಿಲೇಶ್‌ ಯಾದವ್‌   

ಗಾಜಿಪುರ (ಉತ್ತರ ಪ್ರದೇಶ): ಬಿಜೆಪಿ ಮತ್ತು ಬಿಎಸ್‌ಪಿ ಪಕ್ಷಗಳು ಗೋಪ್ಯವಾಗಿ ಪರಸ್ಪರ ಕೈಜೋಡಿಸಿವೆ. ಹೀಗಾಗಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮತದಾರರು ಸಂವಿಧಾನ ಉಳಿಸಲು ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡಿ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಮನವಿ ಮಾಡಿದರು.

ಉತ್ತರ ಪ್ರದೇಶದಿಂದ ಮಾತ್ರ ದೇಶವನ್ನು ಉಳಿಸಲು ಸಾಧ್ಯ ಎಂದ ಅವರು, ರಾಜ್ಯದ ಜನರು ಬಿಜೆಪಿಗೆ ಮಾತ ಹಾಕಬೇಡಿ ಎಂದರು.

ಇಲ್ಲಿ ಚುನಾವಣಾ ಪ್ರಚಾರದಲ್ಲಿ ಸೋಮವಾರ ಮಾತನಾಡಿದ ಅವರು, 'ಇದು ನಮ್ಮ ಭವಿಷ್ಯ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ. ಈ ಬಾರಿ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಕನಸು ಕಾಣುತ್ತಿರುವ ಬಿಜೆಪಿಯು, 400ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳುತ್ತದೆ’ ಎಂದು ವ್ಯಂಗ್ಯವಾಡಿದರು.

ADVERTISEMENT

2019ರ ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಜಂಟಿಯಾಗಿ ಸ್ಪರ್ಧಿಸಿದ್ದವು. ಆದರೆ ಈ ಬಾರಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.